ಸೆಪ್ಟೆಂಬರ್ 2 ರಂದು ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸುತ್ತಿದ್ದು, ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯುವ ವಿವಿಧ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದಕ್ಷಿಣ ಮತ್ತು ಉಡುಪಿ ಜಿಲ್ಲೆಯ ಜನತೆಯ ಪರವಾಗಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ಜೊತೆಗೆ ಪರಶುರಾಮನ ಸ್ಮರಣಿಕೆಯನ್ನು ನೀಡಲು ನಿರ್ಧರಿಸಲಾಗಿದೆ. ಈ ವಿಷಯವನ್ನು ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ.
ತುಳುನಾಡು ಪರಶುರಾಮನ ಸೃಷ್ಟಿಯಾಗಿದ್ದು, ಹೀಗಾಗಿ ಈ ನೆಲದ ಭಾಷೆ, ವೈಶಿಷ್ಟ್ಯತೆಯನ್ನು ಸಾರುವ ಉದ್ದೇಶದಿಂದ ಪಂಚಲೋಹದ ಪರಶುರಾಮನ ಸ್ಮರಣಿಕೆಯನ್ನು ಪ್ರಧಾನಿ ನರೇಂದ್ರ ಮೋದಿಯವರಿಗೆ ನೀಡಲಾಗುತ್ತದೆ ಎಂದು ಸುನಿಲ್ ಕುಮಾರ್ ಮಾಹಿತಿ ನೀಡಿದ್ದಾರೆ.