alex Certify ಸೇನೆ ಸೇರಬಯಸುವ ಅಭ್ಯರ್ಥಿಗಳಿಗೆ ಬಂಪರ್ ಸುದ್ದಿ: ಶೀಘ್ರದಲ್ಲೇ ನೇಮಕ ಪ್ರಕ್ರಿಯೆ ಆರಂಭ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೇನೆ ಸೇರಬಯಸುವ ಅಭ್ಯರ್ಥಿಗಳಿಗೆ ಬಂಪರ್ ಸುದ್ದಿ: ಶೀಘ್ರದಲ್ಲೇ ನೇಮಕ ಪ್ರಕ್ರಿಯೆ ಆರಂಭ

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಬೇಕೆಂಬ ಅಭ್ಯರ್ಥಿಗಳಿಗೆ ಬಂಪರ್ ಸುದ್ದಿಯೊಂದು ಇಲ್ಲಿದೆ. ಕೋವಿಡ್ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ತಿಳಿದುಬಂದಿದೆ.

ಆಗಸ್ಟ್ ನಿಂದ ಡಿಸೆಂಬರ್ ತನಕ ಈ ರ್ಯಾಲಿಗಳು ಕರ್ನಾಟಕ ಸೇರಿದಂತೆ ದೇಶದ ವಿವಿಧ ಜಿಲ್ಲೆಗಳಲ್ಲಿ ನಡೆಯಲಿದ್ದು, ಈ ಕುರಿತ ಪ್ರಕಟಣೆ ಸದ್ಯದಲ್ಲೇ ಹೊರಬೀಳುವ ಸಾಧ್ಯತೆ ಇದೆ.

ಈ ಹಿಂದೆ ಅಂದರೆ ಕೋವಿಡ್ ಪೂರ್ವದಲ್ಲಿ ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ರಾಜ್ಯಗಳ 8 ಜಿಲ್ಲೆಗಳಲ್ಲಿ 100 ನೇಮಕಾತಿ ರ್ಯಾಲಿಗಳು ನಡೆಯುತ್ತಿದ್ದವು. ಆದರೆ ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಇದಕ್ಕೆ ತಡೆ ಬಿದ್ದಿತ್ತು. ಇದೀಗ ಕೊರೊನಾ ಇಳಿಮುಖವಾಗಿರುವ ಕಾರಣ ಮತ್ತೆ ಇದಕ್ಕೆ ಚಾಲನೆ ನೀಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...