ತುಮಕೂರು : ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಶೀಘ್ರವೇ ಸೈಬರ್ ಅಪರಾಧಗಳ ನಿಯಂತ್ರಣಕ್ಕೆ ಹೊಸ ಕಾನುನು ರೂಪಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸೈಬರ್ ಅಪರಾಧಗಳು ಹೆಚ್ಚುತ್ತಿದ್ದು, ಇದನ್ನು ನಿಯಂತ್ರಿಸಲು ಮಾಹಿತಿ ತಂತ್ರಜ್ಞಾನ ಹಾಗೂ ಪೊಲೀಸ್ ಇಲಾಖೆಯ ಸಹಭಾಗಿತ್ವದಲ್ಲಿ ಸೈಬರ್ ಕಾಯ್ದೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನೂ ಕೇರಳದ ಎರ್ನಾಕುಲಂನಲ್ಲಿ ನಡೆದ ಬಾಂಬ್ ಸ್ಪೋಟದ ನಂತರ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸಲಾಗಿದ್ದು, ಮಂಗಳೂರು ಗಡಿಯಲ್ಲಿ ಎಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದರು.