alex Certify ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್; ಮಹಿಳೆಗೆ ಜೈಲು ಶಿಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಪೋಸ್ಟ್; ಮಹಿಳೆಗೆ ಜೈಲು ಶಿಕ್ಷೆ

ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಪದಗಳನ್ನು ಬರೆದು ಫೋಟೋ ಸಮೇತ ಪೋಸ್ಟ್ ಹಾಕಿದ್ದ ಮಹಿಳೆಯೊಬ್ಬರಿಗೆ ಶಿವಮೊಗ್ಗ ಜಿಲ್ಲಾ ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.

ಕಳೆದ ವರ್ಷ 30 ವರ್ಷದ ಈ ಮಹಿಳೆ, ಬಾಲಕಿ ಮತ್ತವರ ಕುಟುಂಬ ಸದಸ್ಯರ ಫೋಟೋಗಳ ಮೇಲೆ ಅಶ್ಲೀಲ ಪದ ಬರೆದು ಪೋಸ್ಟ್ ಹಾಕಿದ್ದು, ಈ ಸಂಬಂಧ ಭದ್ರಾವತಿ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ತನಿಖೆ ನಡೆಸಿದ್ದ ಸರ್ಕಲ್ ಇನ್ಸ್ ಪೆಕ್ಟರ್ ರಾಘವೇಂದ್ರ ಕಾಂಡಿಕೆ, ಮಹಿಳೆ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದು, ಶುಕ್ರವಾರದಂದು ತೀರ್ಪು ಹೊರ ಬಿದ್ದಿದೆ. ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕ ಹರಿಪ್ರಸಾದ್ ವಾದ ಮಂಡಿಸಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...