alex Certify ಸೌಂಡ್ ಸಿಸ್ಟಮ್ ಬಳಕೆ ವಿಷಯವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸೌಂಡ್ ಸಿಸ್ಟಮ್ ಬಳಕೆ ವಿಷಯವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯ..!

ಕಲಬುರಗಿ: ಹೊಸ ವರ್ಷಾಚರಣೆಯ ಸಂಭ್ರಮವು ಕೊಲೆಯಲ್ಲಿ ಅಂತ್ಯವಾಗಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ನಗರದ ಭವಾನಿ ನಗರದಲ್ಲಿ ನಡೆದಿದ್ದು, ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಸೌಂಡ್ ಬಾಕ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ಆರಂಭವಾಗಿತ್ತು. ಈ ಜಗಳ ವಿಕೋಪಕ್ಕೆ ತಿರುಗಿ ಮಲ್ಲಿಕಾರ್ಜನ(25) ಕೊಲೆಯಾಗಿದ್ದಾನೆ.

ಕೊರೊನಾ ಹಿನ್ನೆಲೆಯಲ್ಲಿ ಸರ್ಕಾರ ಹೊಸ ವರ್ಷಾಚರಣೆಯನ್ನು ಮನೆಯಲ್ಲಿಯೇ ಆಚರಿಸಬೇಕು. ಹೊರಗೆ ಯಾರೂ ತಿರುಗಾಡಬಾರದು ಎಂದು ಹೇಳಿತ್ತು. ಮಲ್ಲಿಕಾರ್ಜುನ್ ಹೊಸ ವರ್ಷಾಚರಣೆಯನ್ನು ಮನೆಯ ಮುಂದೆ ತನ್ನ ಕುಟುಂಬದವರೊಂದಿಗೆ ಆಚರಣೆಗೆ ಮುಂದಾಗಿದ್ದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜನ್ ಸೌಂಡ್ ಬಾಕ್ಸ್ ಇಟ್ಟು, ಜೋರಾಗಿ ಹಾಕಿದ್ದರು. ಆದರೆ, ಇದಕ್ಕೆ ಗ್ರಾಮದಲ್ಲಿನ ಹಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ, 10 ಗಂಟೆಯ ನಂತರ ಸೌಂಡ್ ಹಾಕಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ವಿಷಯವಾಗಿಯೇ ಗ್ರಾಮದಲ್ಲಿನ ಹಲವು ಯುವಕರು ಹಾಗೂ ಮಲ್ಲಿಕಾರ್ಜನ್ ನಡುವೆ ಮಾತಿಗೆ ಮಾತು ಬೆಳೆದಿದೆ. ಇದು ವಿಕೋಪಕ್ಕೆ ತಿರುಗಿ ಜಗಳ ಜೋರಾಗಿದೆ. ಈ ಸಂದರ್ಭದಲ್ಲಿ ಮಲ್ಲಿಕಾರ್ಜನ್ ಗೆ ಚಾಕು ಇರಿಯಲಾಗಿದ್ದು, ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ, ಮಲ್ಲಿಕಾರ್ಜುನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಈ ಕುರಿತು ನಗರದ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...