ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ನಾಲ್ಕರಿಂದ ಆರು ವಾರಗಳ ಕಾಲ ಮುಂದೂಡುವ ಬಗ್ಗೆ ಯೋಚಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಈ ವಿಚಾರವಾಗಿ ತನ್ನ ಸ್ಪಷ್ಟ ನಿಲುವನ್ನು ತಿಳಿಸಲು ಚುನಾವಣಾ ಆಯೋಗಕ್ಕೆ 48 ಗಂಟೆಗಳ ಸಮಯಾವಕಾಶವನ್ನು ನೀಡಿದೆ.
ಪಶ್ಚಿಮ ಬಂಗಾಳದ 7 ಮುನ್ಸಿಪಲ್ ಕಾರ್ಪೋರೇಶನ್ಗಳಲ್ಲಿ ಅಸನ್ಸೋಲ್ ಮುನ್ಸಿಪಲ್ ಕಾರ್ಪೋರೇಷನ್, ಬಿಧಾನ್ ನಗರ ಮುನ್ಸಿಪಲ್ ಕಾರ್ಪೋರೇಷನ್ , ಚಂದರ್ ನಾಗೂರ್ ಮುನ್ಸಿಪಲ್ ಕಾರ್ಪೋರೇಷನ್, ದುರ್ಗಾಪುರ ಮುನ್ಸಿಪಲ್ ಕಾರ್ಪೋರೇಷನ್, ಹೌರಾ ಮುನ್ಸಿಪಲ್ ಕಾರ್ಪೋರೇಷನ್ ಹಾಗೂ ಸಿಲಿಗುರಿ ಮುನ್ಸಿಪಲ್ ಕಾರ್ಪೋರೇಷನ್ಗಳಲ್ಲಿ ಚುನಾವಣೆ ನಡೆಯಲಿದೆ.
ಅಸನ್ಸೋಲ್, ಬಿಧಾನನಗರ, ಸಿಲಿಗುರಿ ಹಾಗೂ ಚಂದನಗರ ಪುರಸಭೆ ಚುನಾವಣೆಯು ಜನವರಿ 22ರಂದು ನಡೆಯಬೇಕಿತ್ತು. ಜನವರಿ 25ರಂದು ಮತ ಎಣಿಕೆಯನ್ನು ನಿಗದಿಪಡಿಸಲಾಗಿದೆ. ಆದರೆ ವಿಮಲ್ ಭಟ್ಟಾಚಾರ್ಯ ಎಂಬವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್ ಪಶ್ಚಿಮ ಬಂಗಾಳ ಚುನಾವಣಾ ಆಯೋಗಕ್ಕೆ ಈ ಸೂಚನೆಯನ್ನು ನೀಡಿದೆ.