alex Certify ಸ್ಥಿತ ಪ್ರಜ್ಞತೆಯಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ಥಿತ ಪ್ರಜ್ಞತೆಯಿಂದ ಕಾರ್ಯನಿರ್ವಹಿಸಿ; ಜಿಲ್ಲಾಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ

ಬೆಂಗಳೂರು: ಜಿಲ್ಲಾಧಿಕಾರಿಗಳು ಸಮಯಪ್ರಜ್ಞೆ, ಸ್ಥಿತ ಪ್ರಜ್ಞತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಒಬ್ಬ ಐಎಎಸ್ ಅಧಿಕಾರಿಗೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುವುದು ಅತ್ಯಂತ ಮಹತ್ವಪೂರ್ಣ ಅವಕಾಶ. ಜಿಲ್ಲೆಯಲ್ಲಿ ನೀವು ಯಾವ ರೀತಿ ಹೆಜ್ಜೆ ಗುರುತು ಬಿಡುತ್ತೀರಿ ಎನ್ನುವುದು ಮುಖ್ಯವಾದುದು. ಹುದ್ದೆಯ ಜವಾಬ್ದಾರಿ ಮತ್ತು ಆಡಳಿತದ ಪರಿಣಾಮವನ್ನು ಗಮನಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕು. ಆಳುವುದು ಬೇರೆ, ಆಡಳಿತ ಮಾಡುವುದು ಬೇರೆ. ಇದನ್ನು ಗಮನದಲ್ಲಿರಿಸಿಕೊಂಡು ಕಾರ್ಯ ನಿರ್ವಹಿಸುವಂತೆ ಸಲಹೆ ನೀಡಿದರು.

ಯಾವುದೇ ಕೆಲಸವಾದರೂ ಮಾಡಬಾರದು ಅಂದುಕೊಂಡರೆ, 101 ಕಾರಣ ಸಿಗುತ್ತದೆ. ಆದರೆ ಒಂದು ಒಳ್ಳೆಯ ಕೆಲಸ ಮಾಡಬೇಕು ಎಂದುಕೊಂಡರೆ ಒಂದೇ ಒಂದು ಕಾರಣ ಸಾಕು. ಆದ್ದರಿಂದ ಸಕಾಲಿಕ ತೀರ್ಮಾನಗಳನ್ನು ಕೈಗೊಳ್ಳುವ ಮೂಲಕ ಉತ್ತಮ ಆಡಳಿತ ನೀಡಬೇಕು. ಸಮಸ್ಯೆಗಳಿದ್ದರೆ, ಕೂಡಲೇ ಹಿರಿಯ ಅಧಿಕಾರಿಗಳ ಮಾರ್ಗದರ್ಶನ ಪಡೆಯಿರಿ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...