alex Certify ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಂದ ವ್ಯಕ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಂದ ವ್ಯಕ್ತಿ

ಬೆಂಗಳೂರು: ಹಣದ ವಿಚಾರವಾಗಿ ಸ್ನೇಹಿತರ ನಡುವೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ವ್ಯಕ್ತಿಯೋರ್ವ ತನ್ನ ಪ್ರಾಣ ಸ್ನೇಹಿತನನ್ನೇ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.

25 ವರ್ಷದ ಶರತ್ ಕುಮಾರ್ ಕೊಲೆಯಾದ ಯುವಕ. ಆರೋಪಿ ಲೋಕೇಶ್ ಹಾಗೂ ಶರತ್ ಕುಮಾರ್ ಇಬ್ಬರೂ ಸ್ನೇಹಿತರಾಗಿದ್ದರು. ಹಣಕಾಸಿನ ವಿಚಾರವಾಗಿ ಇಬ್ಬರ ನಡುವೆ ಗಲಾಟೆ ಆರಂಭವಾಗಿದೆ. ಇದೇ ವಿಚಾರವಾಗಿ ಮಾತಿಗೆ ಮಾತು ಬೆಳೆದು ಆರಂಭದಲ್ಲಿ ಶರತ್ ಕುಮಾರ್, ಲೋಕೇಶ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲು ಮುಂದಾಗಿದ್ದಾನೆ ಎನ್ನಲಾಗಿದೆ.

ಈ ವೇಳೆ ಲೋಕೇಶ್ ತಕ್ಷಣ ಚಾಕುವನ್ನು ಕಸಿದುಕೊಂಡು ಶರತ್ ಕುಮಾರ್ ಗೆ ಅದೇ ಚಾಕುವಿನಿಂದ ಇರಿದಿದ್ದಾನೆ. ಗಂಭೀರವಾಗಿ ಹಲ್ಲೆಗೊಳಗಾದ ಶರತ್ ಕುಮಾರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...