ಖ್ಯಾತ ನಟ ಉಪೇಂದ್ರ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಅವರು ಪ್ರಜಾಕೀಯ ಪಕ್ಷವನ್ನು ಆರಂಭಿಸಿದ್ದು, ವಿಭಿನ್ನ ಭರವಸೆಗಳೊಂದಿಗೆ ಸಾರ್ವಜನಿಕರ ಗಮನ ಸೆಳೆಯುತ್ತಿದೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಪ್ರಜಾಕೀಯ ಪಕ್ಷದ ವತಿಯಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುತ್ತಿದ್ದು, ಶಿವಮೊಗ್ಗ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಒಬ್ಬರು ಸ್ಮಶಾನದಲ್ಲಿ ಪತ್ರಿಕಾಗೋಷ್ಠಿ ನಡೆಸುವ ಮೂಲಕ ವಿಶಿಷ್ಟ ರೀತಿಯಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.
ಹೌದು, ಪ್ರಜಾಕೀಯ ಪಕ್ಷದ ಟಿಕೆಟ್ ಆಕಾಂಕ್ಷಿ ಆರ್. ವೆಂಕಟೇಶ್ ಸ್ಮಶಾನದಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಥೇಟ್ ಉಪೇಂದ್ರ ರೀತಿಯಲ್ಲಿಯೇ ಡೈಲಾಗ್ ಹೊಡೆದಿದ್ದಾರೆ. ಅಲ್ಲದೆ ನಾನು ಶಾಸಕನಾಗಿ ಆಯ್ಕೆಯಾದ ಬಳಿಕ ಜನ ತಿರಸ್ಕರಿಸಿದರೆ ಕೂಡಲೇ ರಾಜೀನಾಮೆ ನೀಡುತ್ತೇನೆ ಎಂದು ಹೇಳಿದ್ದಾರೆ.