ಶಿವಮೊಗ್ಗ: ನಗರದ ಹೊಸಮನೆ ಮೊದಲನೇ ಕ್ರಾಸ್ ನಲ್ಲಿ ರಸ್ತೆ ಮಧ್ಯದಲ್ಲೇ ಬೋರ್ ವೆಲ್ ಇದ್ದು, ಸ್ಮಾರ್ಟ್ ಸಿಟಿಯ ಅದ್ಭುತ ಕಾಮಗಾರಿಗೆ ಸಾಕ್ಷಿಯಾಗಿದೆ.
ಲಕ್ಷಾಂತರ ರೂ. ವೆಚ್ಚದಲ್ಲಿ ನೂತನವಾಗಿ ರಸ್ತೆ ಅಭಿವೃದ್ಧಿಪಡಿಸಲಾಗಿದೆ. ರಸ್ತೆಯ ಎರಡೂ ಬದಿಯಲ್ಲಿ ಸುಂದರ ಫುಟ್ ಪಾತ್ ನಿರ್ಮಿಸಿ ಲಾಕಿಂಗ್ ಟೈಲ್ಸ್ ಅಳವಡಿಸಲಾಗಿದೆ. ಆದರೆ, ರಸ್ತೆಯ ಮಧ್ಯದಲ್ಲೇ ಬೋರ್ ವೆಲ್ ಇದ್ದು, ಇದಕ್ಕೆ ಪರ್ಯಾಯ ವ್ಯವಸ್ಥೆ ಮಾಡದೇ ರಸ್ತೆ ನಿರ್ಮಾಣ ಮಾಡಿದ್ದು, ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿದೆ.
ಬೋರ್ ವೆಲ್ ಬಳಕೆಗೆ ಸುತ್ತಲೂ ನೀರು ತುಂಬಿಸಿಕೊಳ್ಳುವಂತೆ ವ್ಯವಸ್ಥೆ ಮಾಡಿಕೊಡಬೇಕು. ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.