
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.
ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಆಪ್ತ ರಾಗಿದ್ದ ಕಟ್ಟೆ ರಾಮಚಂದ್ರ ಅರಿವು, ವೈಶಾಖದ ದಿನಗಳು ಸಿನಿಮಾ ಮೂಲಕ ಜನಪ್ರಿಯತೆ ಪಡೆದುಕೊಂಡಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಟ್ಟೆ ರಾಮಚಂದ್ರ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ.
ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. ಕಟ್ಟೆ ರಾಮಚಂದ್ರ ಕೇವಲ ನಿರ್ದೇಶಕರಾಗಿ ಮಾತ್ರವಲ್ಲ ನಿರ್ಮಾಪಕರಾಗಿ ಹಾಗೂ ನಟರಾಗಿಯೂ ಗುರುತಿಸಿಕೊಂಡಿದ್ದರು. ಹಿರಿಯ ನಿರ್ದೇಶಕನ ಅಗಲಿಕೆಗೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.