alex Certify ಸ್ವತಂತ್ರದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿ ಬಗ್ಗೆ ಕೇಜ್ರಿವಾಲ್ ಕಳವಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವತಂತ್ರದ ನಂತರ ಸರ್ಕಾರಿ ಶಾಲೆಗಳ ಪರಿಸ್ಥಿತಿ ಬಗ್ಗೆ ಕೇಜ್ರಿವಾಲ್ ಕಳವಳ

ಚಂಡೀಗಡ: ಸ್ವತಂತ್ರ ನಂತರದ ಸರ್ಕಾರಿ ಶಾಲೆಗಳ ಪರಿಸ್ಥಿತಿ ಕುರಿತಂತೆ ದೆಹಲಿ ಸಿಎಂ ಕೇಜ್ರಿವಾಲ್ ಮಾತನಾಡಿದ್ದಾರೆ. ಸ್ವತಂತ್ರ ನಂತರದಲ್ಲಿ ದೇಶದಲ್ಲಿ ಶಿಕ್ಷಣಕ್ಕೆ ಹೆಚ್ಚು ಮಹತ್ವ ನೀಡಬೇಕಿತ್ತು. ಆದರೆ ಅದು ಆಗಿಲ್ಲ ಎಂದು ಹೇಳಿದ್ದಾರೆ.

ಹಿಸ್ಸಾರ್ ನಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಮೇಕ್ ಇಂಡಿಯಾ ನಂ1 ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಈ‌ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹರಿಯಾಣದಲ್ಲಿ ಈಗಿರುವ ಬಿಜೆಪಿ ಹಾಗೂ ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರಗಳು ಸರ್ಕಾರಿ ಶಾಲೆಗಳನ್ನು ಮುಚ್ಚಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಹರಿಯಾಣದಲ್ಲಿ ಈಗಿನ‌ ಸರ್ಕಾರ 190 ಹಾಗೂ ಹಿಂದೆ ಇದ್ದ ಕಾಂಗ್ರೆಸ್ ಸರ್ಕಾರ 500 ಸರ್ಕಾರಿ ಶಾಲೆಗಳನ್ನು ಮುಚ್ಚಿವೆ. ಸರ್ಕಾರಿ ಶಾಲೆಗಳ ಅಭಿವೃದ್ಧಿ ಆಗುವ ಬದಲು ಬಾಗಿಲು ಹಾಕಿಸುವ ಕೆಲಸ ಆಗಿದೆ ಎಂದು ವಿಪಕ್ಷಗಳ ವಿರುದ್ದ ಹರಿಹಾಯ್ದಿದ್ದಾರೆ. ಇದೊಂದು ಅಪಾಯಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ನಮ್ಮ ಸರ್ಕಾರ ಶಾಲೆಗಳನ್ನು ಉನ್ನತೀಕರಿಸುವ ಕೆಲಸ ಮಾಡುತ್ತಿದೆ. ಅದೇ ರೀತಿ ಪಂಜಾಬ್ ನಲ್ಲೂ ಸಿಎಂ ಭಗವಂತ್ ಮಾನ್ ಅವರು ಶಾಲೆಗಳ ಉನ್ನತೀಕರಣ ಮಾಡುತ್ತಿದ್ದಾರೆ ಎಂದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...