alex Certify ಸ್ವಯಂ ಘೋಷಿತ ದೇವಮಾನವ ಅಸಾರಂ ಬಾಪು ಆಶ್ರಮದಲ್ಲಿ ಬಾಲಕಿ ಶವ ಪತ್ತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಯಂ ಘೋಷಿತ ದೇವಮಾನವ ಅಸಾರಂ ಬಾಪು ಆಶ್ರಮದಲ್ಲಿ ಬಾಲಕಿ ಶವ ಪತ್ತೆ

ಏಪ್ರಿಲ್​ 5ರಂದು ಕಣ್ಮರೆಯಾಗಿದ್ದ 14 ವರ್ಷ ಬಾಲಕಿಯ ಮೃತದೇಹವು ಉತ್ತರ ಪ್ರದೇಶದ ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರಿ ಅಸಾರಾಂ ಬಾಪು ಆಶ್ರಮದಲ್ಲಿ ನಿಲ್ಲಿಸಲಾಗಿದ್ದ ಆಲ್ಟೋ ಕಾರಿನಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ವಶಕ್ಕೆ ಪಡೆದ ಪೊಲೀಸರು ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಕಳುಹಿಸಿಕೊಟ್ಟಿದ್ದಾರೆ.

ಈ ಪ್ರಕರಣ ಸಂಬಂಧ ಹೆಚ್ಚಿನ ತನಿಖೆಯನ್ನು ನಡೆಸಲು ಪೊಲೀಸರು ಆಶ್ರಮಕ್ಕೆ ಸೇರಿದ ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಅಲ್ಲದೇ ಉತ್ತರ ಪ್ರದೇಶದ ಗೊಂಡಾದ ದೇಹತ್​ ಕೊಟ್ವಾಲಿ ಪ್ರದೇಶದಲ್ಲಿ ಇರುವ ಆಶ್ರಮವನ್ನು ಪೊಲೀಸರು ಸೀಲ್​ ಮಾಡಿದ್ದಾರೆ. ಈ ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಸಲು ವಿಧಿವಿಜ್ಞಾನ ತಜ್ಞರು ಪೊಲೀಸರಿಗೆ ಸಲಹೆ ನೀಡುತ್ತಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಬಾಲಕಿಯನ್ನು ಕೊಲೆ ಮಾಡಿ ಬಳಿಕ ಶವವನ್ನು ಕಾರಿನಲ್ಲಿ ಬಚ್ಚಿಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

2018ರಲ್ಲಿ ಜೋಧ್​ಪುರ ವಿಶೇಷ ನ್ಯಾಯಾಲಯವು ಅತ್ಯಾಚಾರದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುಗೆ ಜೀವಾವಧಿ ಶಿಕ್ಷೆಯನ್ನು ಘೋಷಣೆ ಮಾಡಿತ್ತು. 2013ರಲ್ಲಿ ಜೋಧ್​ಪುರ ಆಶ್ರಮದಲ್ಲಿ 16 ವರ್ಷದ ಬಾಲಕಿಯ ಮೇಲೆ ಅಸಾರಂ ಬಾಪು ಅತ್ಯಾಚಾರವೆಸಗಿರುವುದು ಸಾಬೀತಾಗಿತ್ತು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...