ಈ ಬಾರಿಯ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ದೇಶದಾದ್ಯಂತ ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಅಭಿಯಾನವನ್ನು ಕೇಂದ್ರ ಸರ್ಕಾರ ಆಯೋಜಿಸಿದೆ.
ಇದಕ್ಕಾಗಿ ಸಕಲ ಸಿದ್ಧತೆಗಳು ನಡೆದಿರುವ ಮಧ್ಯೆ ಶಿವಮೊಗ್ಗದಲ್ಲಿ ಸ್ವಾತಂತ್ರ ಹೋರಾಟದ ಪ್ರಮುಖ ಘಟನೆಗಳನ್ನು ಆಧರಿಸಿದ ಎರಡು ನಾಟಕಗಳು ಆಗಸ್ಟ್ 6ರ ಸಂಜೆ 6-30 ರಿಂದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಪ್ರದರ್ಶನಗೊಳ್ಳಲಿವೆ.
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಈಸೂರಿನಲ್ಲಿ 1942 ರಲ್ಲಿ ನಡೆದ ಸ್ವಾತಂತ್ರ ಹೋರಾಟದ ಕಥಾವಸ್ತು ಇರುವ ‘ಏಸೂರ ಕೊಟ್ಟರೂ ಈಸೂರ ಕೊಡೆವು’ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ವಿದುರಾಶ್ವತ್ಥದಲ್ಲಿ ನಡೆದ ಸತ್ಯಾಗ್ರಹ ಮತ್ತು ಬರ್ಬರ ಹತ್ಯಾಕಾಂಡದ ಹಿನ್ನೆಲೆ ಹೊಂದಿರುವ ‘ವಿದುರಾಶ್ವತ್ಥದ ವೀರಗಾಥೆ – ಹತ್ಯಾಕಾಂಡ’ ನಾಟಕವನ್ನು ಪ್ರದರ್ಶಿಸಲಾಗುತ್ತದೆ.