alex Certify ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಕಂಗೊಳಿಸುತ್ತಿದೆ ಚಿತ್ರದುರ್ಗದ ಕಲ್ಲಿನ ಕೋಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಕಂಗೊಳಿಸುತ್ತಿದೆ ಚಿತ್ರದುರ್ಗದ ಕಲ್ಲಿನ ಕೋಟೆ

75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಆಚರಣೆಗೆ ದೇಶದಾದ್ಯಂತ ಸಕಲ ಸಿದ್ಧತೆ ನಡೆದಿದ್ದು, ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರ ‘ಹರ್ ಘರ್ ತಿರಂಗ’ ಅಭಿಯಾನಕ್ಕೆ ಚಾಲನೆ ನೀಡಿದೆ. ದೇಶವಾಸಿಗಳ ಪ್ರತಿಯೊಬ್ಬರ ಮನೆಯಲ್ಲೂ ಈ ಸಂದರ್ಭದಲ್ಲಿ ತ್ರಿವರ್ಣ ಧ್ವಜ ಕಂಗೊಳಿಸಲಿದೆ.

ಕೋಟೆ ನಾಡು ಚಿತ್ರದುರ್ಗದಲ್ಲೂ ಸಹ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವಕ್ಕೆ ಸಿದ್ಧತೆ ನಡೆದಿದ್ದು, ಐತಿಹಾಸಿಕ ಕಲ್ಲಿನ ಕೋಟೆಯಲ್ಲಿ ತ್ರಿವರ್ಣ ಧ್ವಜದ ಬಣ್ಣದ ಲೈಟಿಂಗ್ಸ್ ನೋಡುಗರ ಮನ ಸೆಳೆಯುತ್ತಿದೆ. ಆಗಸ್ಟ್ 3ರಿಂದ ಆರಂಭವಾಗಿರುವ ತ್ರಿವರ್ಣ ಧ್ವಜ ಬಣ್ಣದ ಈ ವಿದ್ಯುತ್ ದೀಪಾಲಂಕಾರ ಆಗಸ್ಟ್ 16ರ ವರೆಗೆ ಮುಂದುವರಿಯಲಿದೆ.

ಸಂಜೆ ನಂತರ ಕೋಟೆಗೆ ಸಾರ್ವಜನಿಕ ಪ್ರವೇಶಕ್ಕೆ ನಿರ್ಬಂಧವಿರುವ ಹಿನ್ನೆಲೆಯಲ್ಲಿ ದೂರದಿಂದಲೇ ಜನ ತ್ರಿವರ್ಣ ಧ್ವಜ ಬಣ್ಣದ ದೀಪಾಲಂಕಾರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಸುರಿಯುವ ಮಳೆ ನಡುವೆಯೂ ಈ ದೀಪಾಲಂಕಾರ ಎಲ್ಲರ ಕಣ್ಮನ ಸೆಳೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...