alex Certify ಹಣ ಬಲ-ಜನ ಬಲದ ನಡುವಿನ ಹೋರಾಟ; ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆ ನಡುವೆ JDS ಬಿದ್ದಿದೆ; ಬೇಸರ ವ್ಯಕ್ತಪಡಿಸಿದ HDK | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಣ ಬಲ-ಜನ ಬಲದ ನಡುವಿನ ಹೋರಾಟ; ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆ ನಡುವೆ JDS ಬಿದ್ದಿದೆ; ಬೇಸರ ವ್ಯಕ್ತಪಡಿಸಿದ HDK

ಬೆಂಗಳೂರು: ವಿಧಾನಪರಿಷತ್ ಚುನಾವಣೆ ಫಲಿತಾಂಶದ ಕುರಿತು ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹಣ ಬಲ ಮತ್ತು ಜನ ಬಲದ ನಡುವಿನ ಹೋರಾಟದಲ್ಲಿ ಜನ ಬಲಕ್ಕೆ ಸೋಲಾಗಿರುವುದು ಬೇಸರ ತಂದಿದೆ. ರಾಷ್ಟ್ರೀಯ ಪಕ್ಷಗಳ ಹಣದ ಅಬ್ಬರದಲ್ಲಿ ನಾವು ಹಿನ್ನಡೆ ಅನುಭವಿಸಿದ್ದೇವೆ. ಆಣೆ, ಪ್ರಮಾಣಗಳ ನಡುವೆಯೂ ನೈತಿಕ ನೆಲೆಯಲ್ಲಿ ಸೆಣಸಿದ್ದೇವೆ ಎಂದು ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 2023ರ ವಿಧಾನಸಭೆ ಚುನಾವಣೆಯೇ ನಮ್ಮ ಗುರಿ ಎಂದು ಹಿಂದೆಯೇ ಹೇಳಿದ್ದೇನೆ. ಈಗಲೂ ಅದನ್ನೇ ಹೇಳುತ್ತಿದ್ದೇನೆ. ಆ ನಿಟ್ಟಿನಲ್ಲಿ ನಮ್ಮ ತಯಾರಿ ನಡೆದಿದೆ. ಆದರೂ ಈ ಚುನಾವಣೆಯಲ್ಲಿ ಪ್ರಯತ್ನ ಮಾಡಿದ್ದೇವೆ. ದೊಡ್ಡ ಪಕ್ಷಗಳ ಕಾಂಚಾಣ ಹಂಚಿಕೆ ನಡುವೆ ನಾವು ಹಿಂದೆ ಬಿದ್ದಿದ್ದೇವೆ ಎಂದಿದ್ದಾರೆ.

ಚುನಾವಣೆ ಎಂದರೆ ಸೋಲು-ಗೆಲುವು. ಗೆಲುವಿಗಾಗಿ ನಮ್ಮ ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರಾಮಾಣಿಕವಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಶಕ್ತಿ. ಅವರೆಲ್ಲರಿಗೂ ನನ್ನ ಕೃತಜ್ಞತೆ. ಈಗ ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡುತ್ತಿದ್ದೇವೆ. ಹಣಬಲದಿಂದ ಎದುರಾಗುವ ಇಂಥ ಸೋಲುಗಳಿಗೆ ಜೆಡಿಎಸ್ ಎಂದೂ ಧೃತಿಗೆಡುವುದಿಲ್ಲ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಶಕಿ ಏನೆಂಬುದು ತಿಳಿಯಲಿದೆ. ಪಕ್ಷ ಮತ್ತೆ ಪುಟಿದೆದ್ದು ಬರಲಿದೆ. ಜನರಿಗೆ ಜೆಡಿಎಸ್ ಬಗೆಗಿನ ವಿಶ್ವಾಸ ಅಳಿಸಲಾಗದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಪರಿಷತ್ ಚುನಾವಣೆಯಲ್ಲಿ ಗೆದ್ದ ಎಲ್ಲಾ ಅಭ್ಯರ್ಥಿಗಳಿಗೂ ಧನ್ಯವಾದ ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...