alex Certify ಹಬ್ಬಕ್ಕೂ ಮುನ್ನ ‘ಆಭರಣ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಗುಡ್ ನ್ಯೂಸ್; 6 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದ ಚಿನ್ನದ ಬೆಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬಕ್ಕೂ ಮುನ್ನ ‘ಆಭರಣ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಗುಡ್ ನ್ಯೂಸ್; 6 ತಿಂಗಳ ಕನಿಷ್ಠ ಮಟ್ಟಕ್ಕೆ ಇಳಿದ ಚಿನ್ನದ ಬೆಲೆ

ನಾಡಹಬ್ಬ ದಸರಾ ಸಮೀಪಿಸುತ್ತಿದೆ. ಇದಾದ ಬಳಿಕ ದೀಪಾವಳಿ ಬರಲಿದೆ. ಹೀಗೆ ಹಬ್ಬದ ಸಂದರ್ಭದಲ್ಲಿ ಚಿನ್ನ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ.

ಶುಕ್ರವಾರದಂದು ಚಿನ್ನದ ಬೆಲೆಯಲ್ಲಿ ಬರೋಬ್ಬರಿ 813 ರೂಪಾಯಿಗಳು ಇಳಿಕೆಯಾಗಿದ್ದು, ಹತ್ತು ಗ್ರಾಂ ಚಿನ್ನದ ಬೆಲೆ ಈಗ 49,447 ರೂಪಾಯಿಗಳಾಗಿದೆ.

ಇದು ಆರು ತಿಂಗಳ ಕನಿಷ್ಠ ಮಟ್ಟದ ಬೆಲೆಯಾಗಿದ್ದು, 50,000 ಗಳಿಗಿಂತ ಈಗ ಕೆಳಗೆ ಬಂದಿದೆ. ಮತ್ತೊಂದು ಗಮನಾರ್ಹ ಸಂಗತಿ ಎಂದರೆ ಕಳೆದ ಒಂದು ವಾರದಲ್ಲಿ ಚಿನ್ನದ ಬೆಲೆ ಒಟ್ಟು 1500 ರೂಪಾಯಿ ಇಳಿಕೆಯಾದಂತಾಗಿದೆ.

ಅಂತರಾಷ್ಟ್ರೀಯ ಮಾರುಕಟ್ಟೆಯ ಬೆಳವಣಿಗೆ ಹಿನ್ನೆಲೆಯಲ್ಲಿ ಬೆಲೆ ಇಳಿಕೆಯಾಗಿದೆ ಎನ್ನಲಾಗಿದ್ದು, ಪ್ರತಿ ಕೆಜಿ ಬೆಳ್ಳಿ ಬೆಲೆಯಲ್ಲೂ 1,379 ರೂಪಾಯಿ ಇಳಿಕೆ ಕಾಣುವ ಮೂಲಕ ಈಗ ಕೆಜಿ ಬೆಳ್ಳಿ ಬೆಲೆ 55,982 ರೂಪಾಯಿ ಆಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...