ಹಬ್ಬದ ಋತು ಸಮೀಪಿಸುತ್ತಿರುವ ಸಂದರ್ಭದಲ್ಲಿ ಆಭರಣ ಪ್ರಿಯರಿಗೆ ಖುಷಿ ಸುದ್ದಿ ಸಿಕ್ಕಿದೆ. ಗಗನಕ್ಕೇರಿದ್ದ ಚಿನ್ನದ ಬೆಲೆಯಲ್ಲಿ ಇಳಿಕೆ ಕಾಣುತ್ತಿದ್ದು, ಕಳೆದ ಮೂರು ದಿನಗಳಿಂದ ಹಳದಿ ಲೋಹದ ಬೆಲೆ ಬರೋಬ್ಬರಿ 1200 ರೂಪಾಯಿ ಇಳಿಕೆಯಾಗಿದೆ.
ಅಂತರಾಷ್ಟ್ರೀಯ ಮಾರುಕಟ್ಟೆಗನುಗುಣವಾಗಿ ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ ಎನ್ನಲಾಗಿದ್ದು, ಶುಕ್ರವಾರದಂದು 430 ರೂಪಾಯಿ ಇಳಿಕೆ ಕಂಡಿದೆ. ಈ ಮೂಲಕ ಕಳೆದ ಮೂರು ದಿನಗಳಿಂದ ಚಿನ್ನದ ಬೆಲೆಯಲ್ಲಿ ಒಟ್ಟು 1200 ರೂಪಾಯಿ ಇಳಿಕೆಯಾದಂತಾಗಿದೆ.
ಶುಕ್ರವಾರದಂದು ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ದರ ಪ್ರತಿ 10 ಗ್ರಾಂ ಗೆ 47,130 ರೂಪಾಯಿಗಳಾಗಿದ್ದರೆ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ 10 ಗ್ರಾಂಗೆ 43,200 ರೂಪಾಯಿ ತಲುಪಿದೆ. ಮುಂದಿನ ದಿನಗಳಲ್ಲಿ ಚಿನ್ನದ ಬೆಲೆ ಮತ್ತಷ್ಟು ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.