ರಾಜ್ಯದಾದ್ಯಂತ ಗೌರಿ – ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಮಹಾಮಾರಿ ಕೊರೊನಾ ಕಾರಣಕ್ಕೆ ಕಳೆದ ಎರಡು ವರ್ಷಗಳಿಂದ ಕಳೆಗುಂದಿದ್ದ ಹಬ್ಬಕ್ಕೆ ಈಗ ರಂಗು ಬಂದಿದೆ. ಸರ್ಕಾರವೂ ಸಹ ಗಣೇಶೋತ್ಸವ ಸಾರ್ವಜನಿಕ ಆಚರಣೆಗೆ ಅನುಮತಿ ನೀಡಿರುವುದು ಹಬ್ಬಕ್ಕೆ ಮತ್ತಷ್ಟು ಕಳೆ ತಂದಿದೆ.
ಹಬ್ಬಕ್ಕಾಗಿ ಊರಿಗೆ ತೆರಳುವವರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಖುಷಿ ಸುದ್ದಿಯೊಂದನ್ನು ನೀಡಿದ್ದು, ರಾಜ್ಯ ಮತ್ತು ಹೊರ ರಾಜ್ಯದ ವಿವಿಧ ಪ್ರದೇಶಗಳಿಂದ ಹೆಚ್ಚುವರಿಯಾಗಿ 500 ಬಸ್ಸುಗಳನ್ನು ಆರಂಭಿಸಿದೆ.
ಅಲ್ಲದೆ ನಾಲ್ಕು ಅಥವಾ ಅದಕ್ಕಿಂತ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್ ಕಾಯ್ದಿರಿಸಿದಲ್ಲಿ ಅಂತವರಿಗೆ ಶೇಕಡಾ 5ರಷ್ಟು ರಿಯಾಯಿತಿ ನೀಡಲಾಗುತ್ತದೆ. ಜೊತೆಗೆ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್ ಅನ್ನು ಒಟ್ಟಿಗೆ ಬುಕ್ ಮಾಡಿದರೆ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುತ್ತದೆ.