alex Certify ಹಬ್ಬದ ಸಂದರ್ಭದಲ್ಲಿ ‘ಚಿನ್ನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದ ಸಂದರ್ಭದಲ್ಲಿ ‘ಚಿನ್ನ’ ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್

ಸಾಲು ಸಾಲು ಹಬ್ಬಗಳು ಆರಂಭವಾಗಿದ್ದು, ವಿವಾಹ ಸೇರಿದಂತೆ ಶುಭ ಕಾರ್ಯಗಳನ್ನು ಮಾಡಲು ಜನತೆ ಸಿದ್ಧರಾಗುತ್ತಿದ್ದಾರೆ. ಇದರ ಮಧ್ಯೆ ಕಳೆದ ಒಂದು ವರ್ಷದಿಂದ ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಕೊರೊನಾ ಮಹಾಮಾರಿಯಿಂದಾಗಿ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ.

ಹೀಗಾಗಿ ಶುಭ ಸಮಾರಂಭಗಳಿಗೆ ಚಿನ್ನ ಖರೀದಿಸಬೇಕೆಂದುಕೊಂಡವರಿಗೆ ದುಬಾರಿ ಬೆಲೆಯಿಂದಾಗಿ ನಿರಾಸೆಯಾಗಿತ್ತು. ಆದರೆ ಶುಕ್ರವಾರದಂದು 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 1,130 ರಷ್ಟು ಇಳಿಕೆಯಾಗುವ ಮೂಲಕ ಖರೀದಿದಾರರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಶುಕ್ರವಾರದಂದು ದೆಹಲಿಯ ಚಿನಿವಾರಪೇಟೆಯಲ್ಲಿ 10 ಗ್ರಾಂ ಚಿನ್ನ 45,207 ರೂಪಾಯಿಗಳಿಗೆ ಮಾರಾಟವಾಗಿದ್ದು, ಬೆಳ್ಳಿ ಬೆಲೆಯಲ್ಲೂ ಕೆಜಿಗೆ 708 ರೂಪಾಯಿ ಇಳಿಕೆ ಕಂಡಿದೆ. ಈ ಮೂಲಕ ಕೆಜಿ ಬೆಳ್ಳಿ 60,183 ರೂಪಾಯಿಗಳಿಗೆ ಮಾರಾಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...