alex Certify ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಒತ್ತಾಯಿಸಿ NPS ನೌಕರರ ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಲು ಒತ್ತಾಯಿಸಿ NPS ನೌಕರರ ಪ್ರತಿಭಟನೆ

ಹಳೆ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೊಳಿಸುವಂತೆ ಒತ್ತಾಯಿಸಿ NPS ನೌಕರರು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಎನ್ ಪಿ ಎಸ್ ಸರ್ಕಾರಿ ನೌಕರರ ಸಂಘದ ತಾಲೂಕು ಶಾಖೆ ವತಿಯಿಂದ ಸೋಮವಾರದಂದು ಈ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ಮಾತನಾಡಿದ ಎನ್‌.ಪಿ.ಎಸ್. ಸರ್ಕಾರಿ ನೌಕರ ಸಂಘದ ರಾಜ್ಯ ಉಪಾಧ್ಯಕ್ಷ ಸಿದ್ದಪ್ಪ ಸಂಗಣ್ಣನವರ್, ಹೊಸ ಪಿಂಚಣಿ ಯೋಜನೆ ಜಾರಿಯಿಂದಾಗಿ ಸರ್ಕಾರಿ ನೌಕರರಿಗೆ ಭದ್ರತೆ ಇಲ್ಲದಂತಾಗಿದೆ. ಹೊಸ ಪಿಂಚಣಿ ಯೋಜನೆಯಿಂದಾಗಿ ಸಂಧ್ಯಾಕಾಲದಲ್ಲಿ ನೌಕರರ ಬದುಕು ಬೀದಿಗೆ ಬೀಳುವಂತಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ ದೇಶದ ನಾಲ್ಕು ರಾಜ್ಯಗಳಲ್ಲಿ ನೂತನ ಪಿಂಚಣಿ ಯೋಜನೆಯನ್ನು ರದ್ದುಪಡಿಸಲಾಗಿದೆ. ರಾಜ್ಯದಲ್ಲೂ ಕೂಡ ನೂತನ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ ಅವರು, ಸರ್ಕಾರ ಕೂಡಲೇ ನಮ್ಮ ಬೇಡಿಕೆಗೆ ಸ್ಪಂದಿಸಬೇಕು ಎಂದು ಒತ್ತಾಯಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...