
ತೆಲುಗು ಹಾಗು ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮಾಡಿಸಿರುವ ದಕ್ಷಿಣ ಭಾರತದ ಖ್ಯಾತ ನಟಿ ಕೀರ್ತಿ ಸುರೇಶ್ ಫೋಟೋಶೂಟ್ನಲ್ಲೂ ಸಾಕಷ್ಟು ಬಿಜಿಯಾಗಿದ್ದು, ತಮ್ಮ instagram ಖಾತೆಯಲ್ಲಿ ತಮ್ಮ ಪ್ರತಿಯೊಂದು ವಿಚಾರವನ್ನು ಅಭಿಮಾನಿಗಳೊಂದಿಗೆ ಹಂಚಿಕೊಳ್ಳುತ್ತಿರುತ್ತಾರೆ.
ಕೀರ್ತಿ ಸುರೇಶ್ ಗೆ instagram ನಲ್ಲಿ ಸುಮಾರು 14 ಮಿಲಿಯನ್ ಫಾಲೋವರ್ಸ್ ಇದ್ದಾರೆ. ಕೀರ್ತಿ ಸುರೇಶ್ ಇತ್ತೀಚೆಗೆ ಫೋಟೋಶೂಟ್ ಮಾಡಿಸಿದ್ದು, ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳಿಗೆ ನೆಟ್ಟಿಗರಿಂದ ಸಾಕಷ್ಟು ಪ್ರತಿಕ್ರಿಯೆಗಳು ಬಂದಿವೆ.
ಸಿನಿಮಾ ವಿಚಾರಕ್ಕೆ ಬಂದರೆ ಕೀರ್ತಿ ಸುರೇಶ್ ತೆಲುಗಿನಲ್ಲಿ ‘ದಸರಾ’ ಚಿತ್ರದಲ್ಲಿ ಅಭಿನಯಿಸಿದ್ದು, ಇದೇ ತಿಂಗಳಲ್ಲಿ ತೆರೆಕಾಣಲಿದೆ. ಇನ್ನು ಮೆಗಾಸ್ಟಾರ್ ಚಿರಂಜೀವಿ ಅವರ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತಮಿಳು ಚಿತ್ರರಂಗದಲ್ಲಿ ಸಾಲು ಸಾಲು ಸಿನಿಮಾಗಳಲ್ಲಿ ಅಭಿನಯಿಸುವ ಮೂಲಕ ಬೇಡಿಕೆಯ ನಟಿಯಾಗಿದ್ದಾರೆ.


