ಬೆಂಗಳೂರು: ಹಾಲಿನ ಪ್ರೋತ್ಸಾಹ ಧನ ಕಡಿತ ಮಾಡಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಕೆ ಎಂ ಎಫ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ. ಹಾಲಿನ ಪ್ರೋತ್ಸಾಹ ಧನ ಕಡಿತ ಮಾಡದಂತೆ ಸೂಚನೆ ನೀಡಿದ್ದಾರೆ.
ರೈತರಿಂದ ಖರೀದಿಸುವ ಹಾಲಿನ ಪ್ರೋತ್ಸಾಹ ಧನ ಕಡಿತ ಮಾಡಬೇಡಿ. ಏಕಾಏಕಿ ಪ್ರೋತ್ಸಾಹ ಧನ ಕಡಿತ ಮಾಡಿದರೆ ರೈತರಿಗೆ ತೊಂದರೆ ಆಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕರ ಜೊತೆ ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದು, ಹಾಲಿನ ಪ್ರೋತ್ಸಾಹ ಧನ ಕಡಿತ ಮಾಡದಂತೆ ಸೂಚನೆ ನೀಡಿದ್ದಾರೆ.