
ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.
ಚನ್ನರಾಯಪಟ್ಟಣ ಮೂಲದ 20 ವರ್ಷ ವಯಸ್ಸಿನ ಕಿಶೋರ್ ಸಾವನ್ನಪ್ಪಿದವರಾಗಿದ್ದು, ಈತ ದ್ವಿತೀಯ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಎನ್ನಲಾಗಿದೆ.
ಸೋಮವಾರದಂದು ಈತ ಹಾಸ್ಟೆಲ್ ನಲ್ಲಿ ಕಿಟಕಿಗೆ ನೇಣು ಬಿಗಿದುಕೊಂಡು ಸಾವಿಗೀಡಾಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.