ಕಳೆದ ತಿಂಗಳಿನಿಂದ ಈರುಳ್ಳಿ ಬೆಲೆಯಲ್ಲಿ ಭಾರಿ ಇಳಿಕೆ ಕಾಣುತ್ತಿದ್ದು ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೆ ಬೆಂಬಲ ಬೆಲೆಯನ್ನು ನೀಡುವಂತೆ ಆಗ್ರಹಿಸಿ ಮಹಾರಾಷ್ಟ್ರದಲ್ಲಿ ಬೆಳೆಗಾರರು ಪ್ರತಿಭಟನೆ ನಡೆಸುತ್ತಿದ್ದಾರೆ.
ಇದರ ಮಧ್ಯೆ ಏಪ್ರಿಲ್ – ಜೂನ್ ಅವಧಿಯಲ್ಲಿ ಈರುಳ್ಳಿ ಹಿಂಗಾರು ಬೆಳೆಯಲಾಗುತ್ತಿದ್ದು, ಬೆಲೆ ಇಳಿಕೆ ಕಾಣುತ್ತಿರುವ ಕಾರಣ ಬೆಳೆಗಾರರು ಆತಂಕಗೊಂಡಿದ್ದರು. ಇದರ ಮಧ್ಯೆ ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪಿಯೂಷ್ ಗೋಯಲ್ ಗುಡ್ ನ್ಯೂಸ್ ನೀಡಿದ್ದಾರೆ.
ಕೇಂದ್ರ ಸರ್ಕಾರದ ಸಂಸ್ಥೆಗಳು ಹಿಂಗಾರು ಹಂಗಾಮಿನಲ್ಲಿ ಮೂರು ಲಕ್ಷ ಟನ್ ಈರುಳ್ಳಿ ಖರೀದಿಸಲಿವೆ ಎಂದು ಸಚಿವರು ಹೇಳಿದ್ದು, ರೈತರಿಗೆ ನ್ಯಾಯೋಚಿತ ಬೆಲೆ ಸಿಗುವಂತೆ ಮಾಡುವ ಉದ್ದೇಶದಿಂದ ಖರೀದಿಗೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.