
ಹೌದು, ಕಾಂತಾರ ಸಿನಿಮಾ ಹಿಂದಿಗೆ ಡಬ್ ಆಗ್ತಾ ಇದೆ. ಅಕ್ಟೋಬರ್ 14ರಂದು ಈ ಸಿನಿಮಾ ರಿಲೀಸ್ ಆಗಲಿದೆ. ಸುಮಾರು 2500 ಪರದೆಗಳಲ್ಲಿ ಬಿಡುಗಡೆ ಮಾಡಲು ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಹಿಂದಿಯಲ್ಲೂ ಕಮಾಲ್ ಮಾಡಲು ರೆಡಿಯಾಗಿದೆ ಕಾಂತಾರ. ಈ ವಿಚಾರವನ್ನು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ.
ಈ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಾಯಕನಾಗಿ ನಟಿಸಿದ್ರೆ, ಅವರಿಗೆ ಜೋಡಿಯಾಗಿ ಸಪ್ತಮಿ ಗೌಡ ನಟಿಸಿದ್ದಾರೆ. ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ, ಕಿಶೋರ್ ಮುಂತಾದವರು ಮುಖ್ಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅಜನೀಶ್ ಬಿ. ಲೋಕನಾಥ್ ಅವರ ಸಂಗೀತ, ಅರವಿಂದ್ ಎಸ್. ಕಶ್ಯಪ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಕನ್ನಡದಲ್ಲಿ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುತ್ತಿರುವ ಈ ಸಿನಿಮಾ ಹಿಂದಿಯಲ್ಲೂ ಯಶಸ್ವಿಯಾಗೋದ್ರಲ್ಲಿ ಯಾವಿದೇ ಡೌಟ್ ಇಲ್ಲ.