alex Certify ‘ಹಿಂದುಳಿದ’ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಹಿಂದುಳಿದ’ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಇಲ್ಲಿದೆ ಮಹತ್ವದ ಮಾಹಿತಿ

ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದ್ದು, ಗಂಗಾ ಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಒದಗಿಸಲು ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸೆಪ್ಟೆಂಬರ್ 6ರಿಂದ ಅಕ್ಟೋಬರ್ 20ರವರೆಗೆ ಸೇವಾ ಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಈ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ರೈತರ ಜಮೀನುಗಳು ಖುಷ್ಕಿಯಾಗಿದ್ದು, ನೀರಾವರಿ ಸೌಲಭ್ಯ ಹೊಂದಿರಬಾರದು. ಅರ್ಜಿದಾರರ ಕುಟುಂಬ ವಾರ್ಷಿಕ ವರಮಾನ ಗ್ರಾಮೀಣ ಪ್ರದೇಶದವರಿಗೆ 98,000 ರೂ., ಪಟ್ಟಣ ಪ್ರದೇಶದವರಿಗೆ 1,20,000 ರೂಪಾಯಿಗಳ ಒಳಗಿರಬೇಕು.

ಅರ್ಜಿದಾರರು ಒಂದೇ ಸ್ಥಳದಲ್ಲಿ ಹೊಂದಿಕೊಂಡಂತೆ ಕನಿಷ್ಠ ಎರಡು ಎಕರೆ ಜಮೀನು ಹೊಂದಿರಬೇಕು. ಉಡುಪಿ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಉತ್ತರ ಕನ್ನಡ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ ಒಂದು ಎಕರೆ ಜಮೀನು ಹೊಂದಿರಬೇಕು.

ವೈಯಕ್ತಿಕ ಕೊಳವೆಬಾವಿ ಯೋಜನೆಯಲ್ಲಿ ಘಟಕ ವೆಚ್ಚ 2.50 ಲಕ್ಷ ರೂಪಾಯಿಗಳು, ಇದರಲ್ಲಿ 2 ಲಕ್ಷ ರೂಪಾಯಿ ಸಹಾಯಧನ ಹಾಗೂ 50,000 ನಿಗಮದಿಂದ ಶೇಕಡಾ 4ರ ಬಡ್ಡಿ ದರದಲ್ಲಿ ನೀಡುವ ಸಾಲದ ಮೊತ್ತ ಒಳಗೊಂಡಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ https://www.dbcdc.karnataka.gov.in ಅಥವಾ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ನಿಯಮಿತ ಸಹಾಯವಾಣಿ ಸಂಖ್ಯೆ 080-22374832 ಮತ್ತು 9606066389 ಅಥವಾ 8824300400 ಸಂಪರ್ಕಿಸಬಹುದಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...