ಹಿಂದೂ ಎಂಬ ಶಬ್ದ ಪರ್ಷಿಯನ್ ಭಾಷೆಗೆ ಸೇರಿದ್ದು, ಅದನ್ನು ಎಲ್ಲಿಂದಲೋ ತೆಗೆದುಕೊಂಡು ಬಂದು ನಮ್ಮ ಮೇಲೆ ಹೇರುತ್ತಿದ್ದಾರೆ ಎಂದು ಹೇಳಿರುವ ಮಾಜಿ ಸಚಿವ ಸತೀಶ್ ಜಾರಕಿಹೊಳಿ, ಈ ಕುರಿತು ಚರ್ಚೆ ನಡೆಯಲಿ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ನಿಪ್ಪಾಣಿಯಲ್ಲಿ ಸಮಾರಂಭ ಒಂದರಲ್ಲಿ ಮಾತನಾಡುವ ವೇಳೆ ಈ ವಿಷಯ ತಿಳಿಸಿದ ಅವರು, ಹಿಂದೂ ಶಬ್ದದ ಅರ್ಥ ಕೇಳಿದರೆ ನಿಮಗೆ ನಾಚಿಕೆಯಾಗುತ್ತದೆ. ಅದು ಅಶ್ಲೀಲ ಪದ ಎಂದು ಸತೀಶ್ ಜಾರಕಿಹೊಳಿ ಇದೇ ಸಂದರ್ಭದಲ್ಲಿ ತಿಳಿಸಿದರು.
ಈ ವಿಚಾರ ಈಗಾಗಲೇ ವೆಬ್ಸೈಟ್ನಲ್ಲಿ ಇದೆ ಎಂದು ಹೇಳಿದ ಸತೀಶ್ ಜಾರಕಿಹೊಳಿ, ಹಿಂದೂ ಶಬ್ದ ಹೇಗೆ ಬಂತು ಎಂಬುದರ ಚರ್ಚೆ ಆಗಬೇಕು. ಇತಿಹಾಸವನ್ನು ಇತ್ತೀಚಿನ ದಿನಗಳಲ್ಲಿ ತಿರುಚುವ ಕೆಲಸ ನಡೆಯುತ್ತಿದೆ. ಹಿಂದೂ ಹಿಂದುತ್ವದ ಹೆಸರಿನಲ್ಲಿ ರಾಜಕೀಯ ನಡೆಯುತ್ತಿದೆ ಎಂದು ಹೇಳಿದರು. ಸತೀಶ್ ಜಾರಕಿಹೊಳಿ ಅವರ ಈ ಹೇಳಿಕೆ ಈಗ ವಿವಾದದ ಕಿಡಿ ಹೊತ್ತಿಸಿದೆ.