
ತೀರ್ಪನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನ್ಯಾಯಾಲಯದ ತೀರ್ಪನ್ನು ನಾವು ಸ್ವಾಗತಿಸುತ್ತೇವೆ. ರಾಜ್ಯ ಹಾಗೂ ದೇಶವು ಮುನ್ನೆಡಯಬೇಕು. ಹೈಕೋರ್ಟ್ ಆದೇಶವನ್ನು ಸ್ವೀಕರಿಸುವ ಮೂಲಕ ಎಲ್ಲರೂ ಶಾಂತಿಯನ್ನು ಕಾಪಾಡಬೇಕು ಎಂದು ನಾನು ಪ್ರತಿಯೊಬ್ಬರಲ್ಲೂ ಮನವಿ ಮಾಡುತ್ತೇನೆ. ವಿದ್ಯಾರ್ಥಿಗಳ ಮೂಲಭೂತ ಕೆಲಸವೆಂದರೆ ಅಧ್ಯಯನ ಮಾಡುವುದಾಗಿದೆ. ಇವೆಲ್ಲವನ್ನು ಬಿಟ್ಟು ಅಧ್ಯಯನಕ್ಕಾಗಿ ಅವರೆಲ್ಲ ಒಗ್ಗಟ್ಟಾಗಿರಬೇಕು ಎಂದು ಹೇಳಿದರು.
ಹಿಜಬ್ ಕಡ್ಡಾಯ ಮಾಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್ ತ್ರಿ ಸದಸ್ಯ ಪೀಠ, ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವುದು ಇಸ್ಲಾಮಿಕ್ ಧರ್ಮದ ನಂಬಿಕೆಯಲ್ಲಿ ಅಗತ್ಯವಾದ ಧಾರ್ಮಿಕ ಆಚರಣೆಯ ಭಾಗವಾಗಿಲ್ಲ ಎಂದು ಹೇಳಿದೆ.