ಬಾಗಲಕೋಟೆ: ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ರಾಜ್ಯಾದ್ಯಂತ ಭುಗಿಲೆದ್ದಿದ್ದು, ರಸ್ತೆ ದಾಟುತ್ತಿದ್ದ ಶಿಕ್ಷಕರೊಬ್ಬರ ಮೇಲೆ ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ಸರ್ಕಾರಿ ಪದವಿ ಪೂರ್ವ ಕಾಲೇಜು ಬಳಿ ನಡೆದಿದೆ.
ರಬಕವಿ ಬನಹಟ್ಟಿ ಕಾಲೇಜಿನಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ವಿದ್ಯಾರ್ಥಿಗಳು ಪ್ರತಿಭಟನೆ ತೀವ್ರಗೊಳಿಸಿದ್ದಾರೆ. ಲಾಠಿಚಾರ್ಜ್ ಗೂ ಬಗ್ಗದ ವಿದ್ಯಾರ್ಥಿಗಳು ಬೀದಿಗಿಳಿದು ಹೋರಾಟ ನಡೆಸಿದ್ದಾರೆ.
Shocking: ರಕ್ಷಣೆಗೆ ಸೂಪರ್ ಹೀರೋ ಬರ್ತಾನೆಂಬ ಗುಂಗಿನಲ್ಲಿ ಕೆಳಗೆ ಹಾರಿದ ಬಾಲಕ
ಈ ವೇಳೆ ಕಾಲೇಜು ಬಳಿ ರಸ್ತೆ ದಾಟುತ್ತಿದ್ದ ಶಿಕ್ಷಕರೊಬ್ಬರ ಮೇಲೆ ಕಬ್ಬಿಟದ ರಾಡ್ ನಿಂದ ಹಲ್ಲೆ ನಡೆಸಲಾಗಿದ್ದು, ಶಿಕ್ಷಕರ ತಲೆಯಿಂದ ತೀವ್ರವಾಗಿ ರಕ್ತಸ್ರಾವವಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಶಿಕ್ಷಕ ಉತ್ತರ ಕನ್ನಡ ಜಿಲ್ಲೆ ಶಿರಸಿಯ ಮಂಜುನಾಥ್ ನಾಯಕ್ ಎಂದು ಗುರುತಿಸಲಾಗಿದೆ.
ರಬಕವಿ ಬನಹಟ್ಟಿ ಕಾಲೇಜಿನಲ್ಲಿ ನಡೆದ ಕಲ್ಲು ತೂರಾಟ ಘಟನೆಯಲ್ಲಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಗಾಯಾಳು ಶಿಕ್ಷಕ ಹಾಗೂ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.