alex Certify ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿಜಾಬ್ ಧರಿಸಿಯೇ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರು….!

ಕಾಲೇಜಿನಲ್ಲಿ ಕೇಸರಿ V/S ಹಿಜಾಬ್ ವಿವಾದ ಇನ್ನೂ ಮುಂದುವರೆದಿದ್ದು ಮಂಗಳವಾರದಂದು ಉಡುಪಿ ಸರ್ಕಾರಿ ಪದವಿಪೂರ್ವ (ಬಾಲಕಿಯರ) ಕಾಲೇಜಿನ 6 ಮಂದಿ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದಾರೆ. ಆದರೆ ಅವರುಗಳು ತರಗತಿ ಪ್ರವೇಶಿಸದೆ ಕಾಲೇಜಿನ ಹೊರಗಡೆಯೇ ಕುಳಿತುಕೊಂಡಿದ್ದಾರೆ.

ಹಿಜಾಬ್ ತೊಟ್ಟು ಬಂದರೆ ಕಾಲೇಜು ಆವರಣ ಪ್ರವೇಶ ನಿರ್ಬಂಧ ಎಂಬ ನಿರ್ಣಯದ ನಂತರವೂ ಈ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಬಂದಿದ್ದು, ನಾವು ಯಾವ ಅಪರಾಧವನ್ನೂ ಮಾಡಿಲ್ಲ. ಸಂವಿಧಾನ ಕೊಟ್ಟ ಹಕ್ಕನ್ನು ಕೇಳುತ್ತಿದ್ದೇವೆ ಎಂದು ಹೇಳಿದ್ದಾರೆ.

ಅಲ್ಲದೇ ವಿದ್ಯಾರ್ಥಿನಿಯೊಬ್ಬರು ಮಾತನಾಡಿ, ಸ್ಥಳೀಯ ಶಾಸಕರು ಹಿಜಾಬ್ ಧರಿಸಿದರೆ ಕಾಲೇಜಿಗೆ ಬರಬೇಡಿ ಎಂದು ಹೇಳುತ್ತಿದ್ದಾರೆ. ಆದರೆ ಇದು ಸರ್ಕಾರಿ ಕಾಲೇಜು. ಈ ರೀತಿ ಹೇಳಲು ಅವರಿಗೆ ಯಾವುದೇ ಅಧಿಕಾರವಿಲ್ಲ ಎಂದು ತಿಳಿಸಿದ್ದಾರೆ. ವಿದ್ಯಾರ್ಥಿನಿಯರು ಹಿಜಾಬ್ ಧಾರಣೆ ವಿವಾದಕ್ಕೆ ಸಂಬಂಧಿಸಿದಂತೆ ಈಗಾಗಲೇ ಹೈಕೋರ್ಟ್ ಮೆಟ್ಟಿಲೇರಿದ್ದು, ಯಾವ ತೀರ್ಪು ಹೊರ ಬರಲಿದೆ ಎಂಬುದನ್ನು ಕಾದು ನೋಡಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...