
ಧಾರವಾಡ: ರಾಜ್ಯಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.
93 ವರ್ಷದ ಹಿರಿಯ ಕವಿ ಚನ್ನವೀರ ಕಣವಿ, ಅನಾರೋಗ್ಯ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಿಸಿದ್ದು, ಈ ವೇಳೆ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.
ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಚನ್ನವೀರ ಕಣವಿ ಧಾರವಾಡದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.