ಬೆಂಗಳೂರು: ಹಿರಿಯ ನಟ ಶಿವರಾಮ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಬ್ರೇನ್ ತೀವ್ರವಾಗಿ ಡ್ಯಾಮೇಜ್ ಆಗಿದೆ ಎಂದು ವೈದ್ಯರು ತಿಳಿಸಿದ್ದಾಗಿ ಶಿವರಾಮ್ ಹಿರಿಯ ಪುತ್ರ ರವಿಶಂಕರ್ ತಿಳಿಸಿದ್ದಾರೆ.
ನಟ ಶಿವರಾಮ್ ಮೂರು ದಿನಗಳ ಹಿಂದೆ ಮನೆಯಲ್ಲಿಯೇ ಬಿದ್ದು ಪ್ರಜ್ಞಾಹೀನ ಸ್ಥಿತಿ ತಲುಪಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸ್ಕ್ಯಾನಿಂಗ್ ವರದಿಯಲ್ಲಿ ಅವರ ಮೆದುಳಿನಲ್ಲಿ ರಕ್ತಶ್ರಾವವಾಗಿರುವುದು ತಿಳಿದುಬಂದಿದೆ. ಸರ್ಜರಿ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ. ಆದರೆ ನಮ್ಮ ತಂದೆಗೆ ವಯಸ್ಸಾಗಿರುವುದರಿಂದ ಸರ್ಜರಿ ಮಾಡಲು ಆಗಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಭೀಕರ ಕಾರು ಅಪಘಾತ; ಹಿರಿಯ ನಟ ಶಿವರಾಮ್ ಸ್ಥಿತಿ ಗಂಭೀರ
ಸಧ್ಯ ಐಸಿಯುನಲ್ಲಿಯೇ ಶಿವರಾಮ್ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಚಿಕಿತ್ಸೆಗೆ ಅಷ್ಟಾಗಿ ಸ್ಪಂದಿಸುತ್ತಿಲ್ಲ. ಅವರು ಬೇಗ ಗುಣಮುಖರಾಗಲೆಂಬುದು ನಮ್ಮ ಪ್ರಾರ್ಥನೆ ಎಂದು ರವಿಶಂಕರ್ ತಿಳಿಸಿದ್ದಾರೆ.