ಬೆಂಗಳೂರು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ಹಿರಿಯ ಸಾಹಿತಿ ಚಂದ್ರಶೇಖರ ಪಾಟೀಲ್ ವಯೋಸಹಜ ಕಾಯಿಲೆಯಿಂದ ವಿಧಿವಶರಾಗಿದ್ದಾರೆ. ’ಚಂಪಾ’ ಎಂದೇ ಖ್ಯಾತಿ ಪಡೆದಿದ್ದ ವರಿಗೆ 83 ವರ್ಷ ವಯಸ್ಸಾಗಿತ್ತು.
ಚಂಪಾ ಅವರು ಇಂದು ಮುಂಜಾನೆ 6:30ರ ಸುಮಾರಿಗೆ ಬೆಂಗಳೂರಿನ ಕೋಣನಕುಂಟೆ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕನ್ನಡ ನಾಡು, ನುಡಿ, ಸಂಸ್ಕೃತಿ ರಕ್ಷಣೆಗೆ ಹೋರಾಡಿದ್ದ ಚಂದ್ರಶೇಖರ ಪಾಟೀಲ ಅವರಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, 2018ನೇ ಸಾಲಿನ ಬಸವಶ್ರೀ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.
ಚಂಪಾ ಅವರ ನಿಧನಕ್ಕೆ ಸಂತಾಪ ಸೂಚಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಚಂಪಾ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ನಷ್ಟವಾಗಿದೆ. ಈ ದು:ಖ ಭರಿಸುವ ಶಕ್ತಿಯನ್ನು ಅವರ ಕುಟುಂಬದವರು, ಭಿಮಾನಿಗಳಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.