alex Certify ಹೀಗಿದೆ ವಿಧಾನ ಪರಿಷತ್ ನಲ್ಲಿ ಪಕ್ಷಗಳ ‘ಬಲಾಬಲ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೀಗಿದೆ ವಿಧಾನ ಪರಿಷತ್ ನಲ್ಲಿ ಪಕ್ಷಗಳ ‘ಬಲಾಬಲ’

ಸೋಮವಾರದಂದು ನಡೆದ ವಿಧಾನಪರಿಷತ್ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಎರಡು ಹಾಗೂ ಕಾಂಗ್ರೆಸ್ ಎರಡು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿವೆ. ಈ ಗೆಲುವಿನ ಬಳಿಕ ಬಿಜೆಪಿ ವಿಧಾನಪರಿಷತ್ ನಲ್ಲಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿದೆ.

ಬಿಜೆಪಿಯ ಬಸವರಾಜ ಹೊರಟ್ಟಿ, ಹಣಮಂತ ನಿರಾಣಿ ಹಾಗೂ ಕಾಂಗ್ರೆಸ್ ನ ಪ್ರಕಾಶ್ ಹುಕ್ಕೇರಿ ಮತ್ತು ಮಧು ಜಿ ಮಾದೇಗೌಡ ವಿಧಾನಪರಿಷತ್ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಜೆಡಿಎಸ್ ಶೂನ್ಯ ಸಂಪಾದನೆ ಮಾಡಿದೆ.

ಈ ಚುನಾವಣೆ ಬಳಿಕ ವಿಧಾನ ಪರಿಷತ್ ನಲ್ಲಿ ಪಕ್ಷಗಳ ಬಲಾಬಲ ಇಂತಿದೆ. ಬಿಜೆಪಿ 39, ಕಾಂಗ್ರೆಸ್ 26, ಜೆಡಿಎಸ್ 8, ಪಕ್ಷೇತರ 1 ಹಾಗೂ ಸಿಎಂ ಇಬ್ರಾಹಿಂ ರಾಜಿನಾಮೆಯಿಂದ ತೆರವಾಗಿರುವ 1 ಸ್ಥಾನ ಖಾಲಿ ಉಳಿದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...