alex Certify ಹುಟ್ಟಿದ್ದು ಹಾಸನ, ಮಣ್ಣಾಗೋದು ರಾಮನಗರದಲ್ಲಿ: HDK ಭಾವುಕ ಮಾತು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟಿದ್ದು ಹಾಸನ, ಮಣ್ಣಾಗೋದು ರಾಮನಗರದಲ್ಲಿ: HDK ಭಾವುಕ ಮಾತು

 

 

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ರಾಮನಗರದಲ್ಲಿ ಇಂದು ಬೃಹತ್ ರೋಡ್ ಶೋ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಾನು ಹುಟ್ಟಿದ್ದು ಹಾಸನದಲ್ಲಾದರೂ ಮಣ್ಣಾಗುವುದು ರಾಮನಗರದಲ್ಲಿ ಎಂದು ಹೇಳುವ ಮೂಲಕ ಭಾವುಕರಾಗಿದ್ದಾರೆ.

ನನ್ನ ಜೀವ ಇರುವವರೆಗೂ ರಾಮನಗರ ಜಿಲ್ಲೆಯನ್ನು ಬಿಡುವುದಿಲ್ಲ ಎಂದು ಹೇಳಿದ ಕುಮಾರಸ್ವಾಮಿ, ಇಲ್ಲಿ ನನ್ನನ್ನು ಸೋಲಿಸಲು ಬಿಜೆಪಿ – ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿವೆ. ಕಾಂಗ್ರೆಸ್ ಗೆಲುವಿಗಾಗಿ ಇಲ್ಲಿ ಬಿಜೆಪಿ ಪ್ರಯತ್ನ ನಡೆಸಲಿದೆ ಎಂದಿದ್ದಾರೆ.

ಇದಕ್ಕೆ ಪ್ರತಿಯಾಗಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರನ್ನು ಗೆಲ್ಲಿಸಲು ಕಾಂಗ್ರೆಸ್ ಯತ್ನಿಸುತ್ತದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...