alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ

ಭಾರತದ ಮಾಜಿ ಕ್ರಿಕೆಟಿಗ ಕ್ಯಾಪ್ಟನ್ ಕೂಲ್ ಎಂಎಸ್‌ ಧೋನಿ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2004ರಂದು ಭಾರತ ಹಾಗೂ ಬಾಂಗ್ಲಾದೇಶ ನಡುವಣ ಏಕದಿನ ಪಂದ್ಯವನ್ನಾಡುವ ಮೂಲಕ ಇವರು ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದರು.

ಎಂಎಸ್ ಧೋನಿ ನಾಯಕತ್ವದಲ್ಲಿ ಭಾರತ ತಂಡ 2007ರಂದು ಐಸಿಸಿ ವರ್ಲ್ಡ್ ಟಿ ಟ್ವೆಂಟಿ ಟ್ರೋಫಿಯನ್ನು ಎತ್ತಿಹಿಡಿದಿತ್ತು. 2011ರಂದು ವಿಶ್ವಕಪ್ ತಂದುಕೊಟ್ಟ ಯಶಸ್ವಿ ನಾಯಕರಾದರು.

WWE ನ ಮತ್ತೊಂದು ಕರಾಳ ಮುಖ ಬಿಚ್ಚಿಟ್ಟ ಮಾಜಿ ವೈದ್ಯ..!

ಎಂಎಸ್ ಧೋನಿ ತಮ್ಮ ಚಾಣಾಕ್ಷತನದಿಂದ ಬೌಲರ್ ಗಳಿಗೆ ಸಲಹೆ ನೀಡುವ ಮೂಲಕ ಎಂತಹ ಘಟಾನುಘಟಿ ಬ್ಯಾಟ್ಸ್‌ಮನ್‌ ಗಳಿಗೆ ಪೆವಿಲಿಯನ್ ಹಾದಿ ತೋರಿಸಿದ್ದಾರೆ.

ಎಂಎಸ್ ಧೋನಿ ಕ್ಯಾಪ್ಟನ್ ಶಿಪ್ ನಲ್ಲಿ 2013ರಂದು ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲಲಾಗಿದೆ. ಹಲವಾರು ಸಾಧನೆಗಳಿಗೆ ಎಂಎಸ್ ಧೋನಿ ಪಾತ್ರರಾಗಿದ್ದಾರೆ.

ಎಂಎಸ್ ಧೋನಿ 2020 ಆಗಸ್ಟ್ 15ರಂದು ಅಂತರರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದರು. ಐಪಿಎಲ್ ನಲ್ಲಿ ಚೆನ್ನೈ ಸೂಪರ್‌ಕಿಂಗ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳಿಂದ, ಕ್ರಿಕೆಟಿಗರಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...