
ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಇಂದು ತಮ್ಮ 38ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಿಷಬ್ ಶೆಟ್ಟಿ 2012ರಲ್ಲಿ ‘ತುಗ್ಲಕ್’ ಚಿತ್ರದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ರಿಷಬ್ ಶೆಟ್ಟಿಯವರ ನಿರ್ದೇಶನದ ಮೊದಲ ಸಿನಿಮಾ ‘ರಿಕ್ಕಿ’ 2016 ರಲ್ಲಿ ಬಿಡುಗಡೆಯಾಗಿತ್ತು ಅದೇ ವರ್ಷದಂದು ಇವರ ನಿರ್ದೇಶನದ ‘ಕಿರಿಕ್ ಪಾರ್ಟಿ’ ಚಿತ್ರ ಡಿಸೆಂಬರ್ ತಿಂಗಳಲ್ಲಿ ರಿಲೀಸ್ ಆಗಿತ್ತು. ಈ ಸಿನಿಮಾ 150 ದಿನಗಳ ಪ್ರದರ್ಶನ ಕಾಣುವ ಮೂಲಕ ಬಾಕ್ಸಾಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ರಿಶಬ್ ಶೆಟ್ಟಿ ಅತ್ಯುತ್ತಮ ನಿರ್ದೇಶಕ ಎಂಬ ಫಿಲಂಫೇರ್ ಪ್ರಶಸ್ತಿಯನ್ನು ಪಡೆದರು.
ಹುಟ್ಟುಹಬ್ಬದ ಸಂಭ್ರಮದಲ್ಲಿ ಕ್ಯಾಪ್ಟನ್ ಕೂಲ್ ಎಂ.ಎಸ್. ಧೋನಿ
ರಿಶಬ್ ಶೆಟ್ಟಿ ನಂತರ ಜಯತೀರ್ಥ ನಿರ್ದೇಶನದ ‘ಬೆಲ್ ಬಾಟಮ್’ ಚಿತ್ರದಲ್ಲಿ ಮೊದಲ ಬಾರಿ ನಾಯಕನಾಗಿ ನಟಿಸಿದರು. 2019ರಲ್ಲಿ ತೆರೆಕಂಡ ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಯಿತು. ರಿಶಬ್ ಶೆಟ್ಟಿ 1983 ಜುಲೈ 7ರಂದು ಕುಂದಾಪುರ ತಾಲೂಕಿನ ಕೆರಾಡಿ ಎಂಬ ಊರಿನಲ್ಲಿ ಜನಿಸಿದ್ದು, ಇಂದು ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.