alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

ನಟ ಸಾರ್ವಭೌಮ ಡಾ. ರಾಜ್ ಕುಮಾರ್ ಅವರ ಜೇಷ್ಠ ಪುತ್ರ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಇಂದು ತಮ್ಮ 59ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1986ರಲ್ಲಿ ಸಂಗೀತಂ ಶ್ರೀನಿವಾಸ್ ರಾವ್ ನಿರ್ದೇಶನದ ‘ಆನಂದ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದ ಶಿವರಾಜ್ ಕುಮಾರ್ ಇದುವರೆಗೂ 100 ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 1995ರಲ್ಲಿ ತೆರೆಕಂಡ ‘ಓಂ’ ಸಿನಿಮಾ ಮೂಲಕ ಇನ್ನಷ್ಟು ಜನಪ್ರಿಯತೆ ಪಡೆದರು ರಿಯಲ್ ಸ್ಟಾರ್ ಉಪೇಂದ್ರ ಈ ಚಿತ್ರವನ್ನು ನಿರ್ದೇಶಿಸಿದ್ದರು.

ಮಸೂಮ್ ಸೆಟ್‌ನಿಂದ ’ಥ್ರೋಬ್ಯಾಕ್’ ಚಿತ್ರ ಶೇರ್‌ ಮಾಡಿಕೊಂಡ ರಾಮ್ ಗೋಪಾಲ್ ವರ್ಮಾ

ಶಿವರಾಜ್ ಕುಮಾರ್ ಹುಟ್ಟುಹಬ್ಬದ ಪ್ರಯುಕ್ತ ಅವರ ನಟನೆಯ ‘ಭಜರಂಗಿ 2’ ಚಿತ್ರದ ಟೀಸರ್ ವೊಂದನ್ನು ಇಂದು ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಿದ್ದಾರೆ. ಶಿವರಾಜ್ ಕುಮಾರ್ ಅವರ 123ನೇ ಸಿನಿಮಾದ ಟೈಟಲ್ ಪೋಸ್ಟರ್ ಕೂಡ ಇಂದು ರಿಲೀಸ್ ಆಗಲಿದೆ ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳು ಹಾಗೂ ಸಿನಿ ತಾರೆಯರು ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...