ಸ್ಯಾಂಡಲ್ ವುಡ್ ನ ಖ್ಯಾತ ಹಿರಿಯ ನಟಿ ಸುಧಾರಾಣಿ ಇಂದು ತಮ್ಮ 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸುಧಾರಾಣಿ 1978ರಲ್ಲಿ ಬಿಡುಗಡೆಯಾದ ‘ಕಿಲಾಡಿ ಕಿಟ್ಟು’ ಚಿತ್ರದಲ್ಲಿ ಬಾಲ ಕಲಾವಿದೆಯಾಗಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು.
1986ರಲ್ಲಿ ಸಿಂಗೀತಂ ಶ್ರೀನಿವಾಸ ರಾವ್ ನಿರ್ದೇಶನದ ‘ಆನಂದ್’ ಚಿತ್ರದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಜೊತೆ ನಾಯಕಿಯಾಗಿ ಅಭಿನಯಿಸಿದರು. ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿತ್ತು.
1 ಮಿಲಿಯನ್ ವೀಕ್ಷಣೆ ಪಡೆದ ‘ಪುಷ್ಪ’ ಚಿತ್ರದ ಕನ್ನಡ ಲಿರಿಕಲ್ ಸಾಂಗ್
ಸುಧಾರಾಣಿ, ನಂತರ ಸಾಕಷ್ಟು ಚಿತ್ರಗಳಲ್ಲಿ ನಟಿಸಿದ್ದು ಕನ್ನಡ ಚಿತ್ರರಂಗದ ಬಹುಬೇಡಿಕೆಯ ನಟಿಯಾಗಿದ್ದರು. ಇತ್ತೀಚೆಗೆ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ನಟನೆಯ ‘ಯುವರತ್ನ’ ಸಿನಿಮಾದಲ್ಲಿ ಅಭಿನಯಿಸಿದ್ದರು. ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸಿನಿತಾರೆಯರು ಸುಧಾರಾಣಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.