alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಘವೇಂದ್ರ ರಾಜ್ ಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ರಾಘವೇಂದ್ರ ರಾಜ್ ಕುಮಾರ್

ವರನಟ ಡಾ.ರಾಜ್ ಕುಮಾರ್ ಪುತ್ರ ನಟ ರಾಘವೇಂದ್ರ ರಾಜ್ ಕುಮಾರ್ ಇಂದು ತಮ್ಮ 56ನೇ  ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಾಘವೇಂದ್ರ ರಾಜ್ ಕುಮಾರ್ 1975ರಲ್ಲಿ ತೆರೆಕಂಡ ‘ಶ್ರೀ ಶ್ರೀನಿವಾಸ ಕಲ್ಯಾಣ’ ಚಿತ್ರದಲ್ಲಿ ಬಾಲಕಲಾವಿದನಾಗಿ ಅಭಿನಯಿಸುವ ಮೂಲಕ  ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದರು. ಇವರು ನಾಯಕನಾಗಿ ನಟಿಸಿದ ಮೊದಲ ಸಿನಿಮಾ ‘ಚಿರಂಜೀವಿ ಸುಧಾಕರ್’ 1988ರಲ್ಲಿ ಈ ಚಿತ್ರ ಬಿಡುಗಡೆಯಾಗಿತ್ತು. ನಂತರ ಅದೇ ವರ್ಷ ಅವರ ಮತ್ತೊಂದು ಚಿತ್ರ ‘ನಂಜುಂಡಿ ಕಲ್ಯಾಣ’ ರಿಲೀಸ್ ಆಗಿತ್ತು ಈ ಸಿನಿಮಾ ಮೂಲಕ ರಾಘವೇಂದ್ರ ರಾಜ್ ಕುಮಾರ್ ಸಾಕಷ್ಟು ಜನಪ್ರಿಯತೆ ಪಡೆದರು.

ತ್ರಿವರ್ಣ ಧ್ವಜಾರೋಹಣ ಮಾಡಿದ ಹಿಜ್ಬುಲ್ ಭಯೋತ್ಪಾದಕನ ತಂದೆ

ರಾಘವೇಂದ್ರ ರಾಜ್ ಕುಮಾರ್ ಇತ್ತೀಚೆಗೆ ‘ರಾಜತಂತ್ರ’ ಹಾಗೂ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದರು. ಇಂದು ಸೋಷಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ, ಸಿನಿತಾರೆಯರಿಂದ, ಹಾಗೂ ಅವರ ಸ್ನೇಹಿತರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...