alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಮೆಗಾಸ್ಟಾರ್ ಚಿರಂಜೀವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಮೆಗಾಸ್ಟಾರ್ ಚಿರಂಜೀವಿ

ಟಾಲಿವುಡ್ ನ ಹಿರಿಯ ನಟ ಮೆಗಾಸ್ಟಾರ್ ಚಿರಂಜೀವಿ ಇಂದು ತಮ್ಮ 66ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಚಿರಂಜೀವಿ 1978ರಲ್ಲಿ ತೆರೆಕಂಡ ‘ಪ್ರಾಣಂ ಖರೀದು’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ನಂತರ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿದ್ದು, ತೆಲುಗಿನ ಸ್ಟಾರ್ ನಟರಾದರು. ಸುಮಾರು 150ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.

ಕೇರಳ ಮಾದರಿಯ 22 ಖಾದ್ಯಗಳೊಂದಿಗೆ ಧೋನಿ ಪತ್ನಿ – ಪುತ್ರಿಯಿಂದ ಓಣಂ ಸಂಭ್ರಮಾಚರಣೆ

ಮೆಗಾಸ್ಟಾರ್ ಚಿರಂಜೀವಿ ಇತ್ತೀಚೆಗೆ ಕೊರಟಾಲ ಶಿವ ನಿರ್ದೇಶನದ ‘ಆಚಾರ್ಯ’ ಚಿತ್ರದಲ್ಲಿ ನಟಿಸಿದ್ದಾರೆ. ನಿರಂಜನ್ ರೆಡ್ಡಿ ನಿರ್ಮಾಣದ ಈ ಸಿನಿಮಾದಲ್ಲಿ ಚಿರಂಜೀವಿ ಪುತ್ರ ರಾಮ್ ಚರಣ್ ಸೇರಿದಂತೆ ಕಾಜಲ್ ಅಗರ್ ವಾಲ್ ಹಾಗೂ ಪೂಜಾ ಹೆಗ್ಡೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಇಂದು ಚಿರಂಜೀವಿ ಹುಟ್ಟುಹಬ್ಬದ ಪ್ರಯುಕ್ತ ಅವರ 153 ನೇ ಚಿತ್ರದ ಟೈಟಲ್ ರಿವೀಲ್ ಮಾಡಲಾಗಿದೆ. ಈ ಸಿನಿಮಾಗೆ ‘ಗಾಡ್ ಫಾದರ್’ ಎಂಬ ಶೀರ್ಷಿಕೆ ಇಟ್ಟಿದ್ದು ಮೋಹನ್ ರಾಜಾ ನಿರ್ದೇಶನ ಮಾಡುತ್ತಿದ್ದಾರೆ. ಇಂದು ಸೋಶಿಯಲ್ ಮೀಡಿಯಾದಲ್ಲಿ ಹಲವಾರು ಸಿನಿತಾರೆಯರು ಚಿರಂಜೀವಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...