
ಸ್ಯಾಂಡಲ್ ವುಡ್ ನ ಹಿರಿಯ ನಟ ರಮೇಶ್ ಅರವಿಂದ್ ಅವರಿಗೆ ಇಂದು 57ನೇ ಹುಟ್ಟುಹಬ್ಬದ ಸಂಭ್ರಮ. ಎಲ್ಲ ರೀತಿಯ ಪಾತ್ರಗಳಿಗೂ ಜೀವ ತುಂಬುವ ಒಬ್ಬ ಪ್ರತಿಭಾವಂತ ನಟರಾಗಿದ್ದಾರೆ.
1986ರಲ್ಲಿ ತೆರೆಕಂಡ ‘ಸುಂದರ ಸ್ವಪ್ನಗಳು’ ಎಂಬ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಸುಮಾರು 140ಕ್ಕೂ ಅಧಿಕ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 55 ನೇ ಸಿನಿಮಾ ಟೈಟಲ್ ರಿವೀಲ್
ಇಂದು ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರ ನಟನೆಯ ‘ಶಿವಾಜಿ ಸುರತ್ಕಲ್ 2’ ಚಿತ್ರದ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಲಾಗಿದೆ. ಕನ್ನಡ ಮಾತ್ರವಲ್ಲದೆ ತಮಿಳು ಹಾಗೂ ತೆಲುಗಿನಲ್ಲಿ ಈ ಸಿನಿಮಾ ಬಿಡುಗಡೆ ಮಾಡುವ ಸಾಧ್ಯತೆಯಿದೆ. ಆಕಾಶ್ ಶ್ರೀವತ್ಸ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ರಮೇಶ್ ಅರವಿಂದ್ ಅವರಿಗೆ ಅವರ ಅಭಿಮಾನಿಗಳಿಂದ ಹಾಗೂ ಸಿನಿಮಾ ಕಲಾವಿದರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.