ಖ್ಯಾತ ಬಹುಭಾಷಾ ನಟಿ ರಮ್ಯ ಕೃಷ್ಣನ್ ಇಂದು ತಮ್ಮ 51ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ರಮ್ಯಕೃಷ್ಣನ್ 1984ರಲ್ಲಿ ತೆರೆಕಂಡ ‘ವೆಲ್ಲೈ ಮನಸು’ ಎಂಬ ತಮಿಳು ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. 1988ರಲ್ಲಿ ‘ಕೃಷ್ಣ ರುಕ್ಮಿಣಿ’ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೂ ಎಂಟ್ರಿ ಕೊಟ್ಟರು. ಕನ್ನಡ ಸೇರಿದಂತೆ ತೆಲುಗು ತಮಿಳು ಮಲೆಯಾಳಂ ಹಾಗೂ ಹಿಂದಿ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
BIG NEWS: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ವಾರಂಟ್ ಜಾರಿ
ಪ್ರಬಾಸ್ ನಟನೆಯ ಬಾಹುಬಲಿ ಚಿತ್ರದಲ್ಲಿ ಶಿವಗಾಮಿ ಎಂಬ ಪಾತ್ರದಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು. ಈ ಸಿನಿಮಾ ಮೂಲಕ ಬೆಸ್ಟ್ ಸಪೋರ್ಟಿಂಗ್ ಆಕ್ಟರ್ ಅವಾರ್ಡ್ ಪಡೆದುಕೊಂಡರು ಎಲ್ಲಾ ಭಾಷೆಗಳಲ್ಲೂ ಸಾಕಷ್ಟು ಫಿಲ್ಮ್ ಫೇರ್ ಪ್ರಶಸ್ತಿಗಳನ್ನು ಬಾಚಿಕೊಂಡಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಿನಿತಾರೆಯರಿಂದ ರಮ್ಯಕೃಷ್ಣನ್ ಅವರಿಗೆ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ