ನಟಿ ಶ್ರದ್ಧಾ ಶ್ರೀನಾಥ್ ಇಂದು ತಮ್ಮ 31ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಶ್ರದ್ಧಾ ಶ್ರೀನಾಥ್ 2015ರಲ್ಲಿ ತೆರೆಕಂಡ ಮಲಯಾಳಂನ ‘ಕೊಹಿನೂರ್’ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು.
ನಂತರ ‘ಯೂ ಟರ್ನ್’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಕನ್ನಡ, ಮಲಯಾಳಂ, ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
18 ವರ್ಷದೊಳಗಿನವರಿಗೆ ಈ ರೆಸ್ಟೋರೆಂಟ್ ಗಿಲ್ಲ ಎಂಟ್ರಿ…!
ಶ್ರದ್ಧಾ ಶ್ರೀನಾಥ್ ಇತ್ತೀಚೆಗೆ ಕನ್ನಡದಲ್ಲಿ ‘ನಿತ್ಯ’ ಎಂಬ ಚಿತ್ರದಲ್ಲಿ ನಟಿಸಿದ್ದು, ತೆಲುಗು ಹಾಗೂ ತಮಿಳು ಭಾಷೆಯಲ್ಲಿ ಮೂಡಿಬರುತ್ತಿರುವ ‘ಕಲಿಯುಗಂ’ ಎಂಬ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸಿನಿ ತಾರೆಯರು ಶ್ರದ್ಧಾ ಶ್ರೀನಾಥ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.