alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಂಜನಾ ಆನಂದ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಸಂಜನಾ ಆನಂದ್

2019 ರಲ್ಲಿ ತೆರೆಕಂಡ ‘ಕೆಮಿಸ್ಟ್ರಿ ಆಫ್ ಕರಿಯಪ್ಪ’ ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರತಿಭಾವಂತ ನಟಿ ಸಂಜನಾ ಆನಂದ್ ಇಂದು ತಮ್ಮ 27ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

ವೆಬ್ ಸಿರೀಸ್ ನಲ್ಲಿ ಕೂಡ ಕಾಣಿಸಿಕೊಂಡಿರುವ ಸಂಜನಾ ಆನಂದ್ ಗೆ ಭರ್ಜರಿ ಯಶಸ್ಸು ತಂದುಕೊಟ್ಟ ಸಿನಿಮಾ ‘ಸಲಗ’. ದುನಿಯಾ ವಿಜಯ್ ನಿರ್ದೇಶಿಸಿ ನಾಯಕನಾಗಿ ನಟಿಸಿದ ಈ ಚಿತ್ರ ಕಳೆದ ವರ್ಷ ತೆರೆಕಂಡು ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸಿತ್ತು.

ಸಂಜನಾ ಆನಂದ್ ಇತ್ತೀಚೆಗೆ ವಿಂಡೋ ಸೀಟ್, ಕ್ಷತ್ರಿಯ ಹಾಗೂ ಅಜಯ್ ರಾವ್ ನಟನೆಯ ಶೋಕಿವಾಲ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಸಂಜನಾ ಆನಂದ್ ಗೆ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...