alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ಜಯಪ್ರದಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಹಿರಿಯ ನಟಿ ಜಯಪ್ರದಾ

ಹಿರಿಯ ನಟಿ ಜಯಪ್ರದಾ ಇಂದು 60ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. 1974 ರಲ್ಲಿ ತೆರೆಕಂಡ ‘ಭೂಮಿ ಕೋಸಂ’ ಎಂಬ ತೆಲುಗು ಚಿತ್ರದ ಮೂಲಕ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿದ ಜಯಪ್ರದಾ ಸುಮಾರು 7 ಭಾಷೆಗಳಲ್ಲಿ ಅಭಿನಯಿಸಿದ್ದು, ಸಾಕಷ್ಟು ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.

ಕನ್ನಡದಲ್ಲಿ ಇವರು ನಟಿಸಿದ ಮೊದಲ ಸಿನಿಮಾ ವರನಟ ಡಾ. ರಾಜ್ ಕುಮಾರ್ ಅವರ ‘ಸನಾದಿ ಅಪ್ಪಣ್ಣ’, ನಂತರ ಸಾಕಷ್ಟು ಕನ್ನಡ ಚಿತ್ರಗಳಲ್ಲಿ ಜಯಪ್ರದಾ ಕಾಣಿಸಿಕೊಂಡಿದ್ದಾರೆ.

2012ರಲ್ಲಿ ತೆರೆಕಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ಸಿನಿಮಾದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಜಯಪ್ರದ ನಂತರ  ಕನ್ನಡದ ಯಾವ  ಚಿತ್ರಗಳಲ್ಲೂ ಕಾಣಿಸಿಕೊಂಡಿಲ್ಲ.

ಇತ್ತೀಚೆಗೆ ಸಿನಿಮಾರಂಗದಿಂದ ದೂರ ಉಳಿದಿದ್ದಾರೆ. ಇಂದು ಸಾಮಾಜಿಕ ಜಾಲತಾಣದಲ್ಲಿ ಚಿತ್ರರಂಗದ ಹಲವಾರು ಸಿನಿತಾರೆಯರು ಶುಭಾಶಯ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...