
ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಮಿಂಚುತ್ತಿರುವ ನಟಿ ಹರ್ಷಿಕಾ ಪೂಣಚ್ಚ ಇಂದು ತಮ್ಮ 29ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2008ರಲ್ಲಿ ತೆರೆಕಂಡ ‘ಪಿಯುಸಿ’ ಎಂಬ ಕನ್ನಡ ಚಿತ್ರದ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಕನ್ನಡ ಮಾತ್ರವಲ್ಲದೆ ಕೊಡವ, ಕೊಂಕಣಿ, ಮಲಯಾಳಂ, ತೆಲುಗು, ಹಾಗೂ ಭೋಜಪುರಿ ಚಿತ್ರರಂಗದಲ್ಲಿ ಅಭಿನಯಿಸಿದ್ದಾರೆ.
ಕನ್ನಡದ ಸಾಕಷ್ಟು ಸಿನಿಮಾಗಳಲ್ಲಿ ಅಭಿನಯಿಸಿರುವ ಇವರು ಇತ್ತೀಚೆಗೆ ಭೋಜ್ಪುರಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ ಪವನ್ ಸಿಂಗ್ ನಟನೆಯ ‘ಹಮ್ ಹೈ ರಾಹಿ ಪ್ಯಾರ್ ಕೆ’ ಎಂಬ ಚಿತ್ರದಲ್ಲಿ ಅಭಿನಯಿಸಿದ್ದರು. ಇಂದು ತಮ್ಮ ಹುಟ್ಟುಹಬ್ಬವನ್ನು ಕುಟುಂಬದೊಂದಿಗೆ ಸರಳವಾಗಿ ಆಚರಿಸುತ್ತಿದ್ದು, ಸ್ಯಾಂಡಲ್ ವುಡ್ ಸೇರಿದಂತೆ ತೆಲುಗು ಮಲಯಾಳಂ ನ ಸೆಲೆಬ್ರಿಟಿಗಳು ಹರ್ಷಿಕಾ ಪೂಣಚ್ಚ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ವಿಶ್ ಮಾಡಿದ್ದಾರೆ.