alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಶ್ರಿಯಾ ಸರನ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ಬಹುಭಾಷಾ ನಟಿ ಶ್ರಿಯಾ ಸರನ್

ಬಹುಭಾಷಾ ನಟಿ ಶ್ರಿಯಾ ಸರನ್ ಇಂದು ತಮ್ಮ 40ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 001ರಲ್ಲಿ ತೆರೆಕಂಡ ವಿಕ್ರಮ್ ಕುಮಾರ್ ನಿರ್ದೇಶನದ ‘ಇಷ್ಟಂ’ ಎಂಬ ತೆಲುಗು ಚಿತ್ರದ ಮೂಲಕ ತಮ್ಮ ಸಿನಿಜರ್ನಿ ಆರಂಭಿಸಿದ ಶ್ರಿಯಾ ಸರನ್ ಗೆ ಅದೇ ವರ್ಷದಂದು ಬಿಡುಗಡೆಯಾದ ‘ಸಂತೋಷಂ’ ಸಿನಿಮಾ ಭರ್ಜರಿ ಯಶಸ್ಸು ತಂದುಕೊಟ್ಟಿತು, ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುವ ಮೂಲಕ ನಂತರ ತೆಲುಗು ಚಿತ್ರರಂಗದ ಬೇಡಿಕೆಯ ನಟಿಯಾದರು.

ನಟಿ ಶ್ರಿಯಾ ಸರನ್ ಕನ್ನಡದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಅರಸು’ ಚಿತ್ರದಲ್ಲಿ ಅತಿಥಿ ಪಾತ್ರವೊಂದರಲ್ಲಿ ಕಾಣಿಸಿಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ತೆಲುಗು ಸೇರಿದಂತೆ ತಮಿಳು, ಮಲಯಾಳಂ, ಕನ್ನಡ, ಹಾಗೂ ಹಿಂದಿ ಭಾಷೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದಾರೆ. ರಾಜಮೌಳಿ ನಿರ್ದೇಶನದ ‘RRR’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದ ಶ್ರೀಯಾ ಸರನ್ ನಟಿಸಿರುವ ‘ದೃಶ್ಯಂ 2’ ಶೂಟಿಂಗ್ ಈಗಾಗಲೇ ಮುಕ್ತಾಯಗೊಂಡಿದ್ದು ರಿಯಲ್ಉಪೇಂದ್ರ ನಟನೆಯ ಕಬ್ಜ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ

ಇಂದು  ಶ್ರಿಯಾ ಸರನ್ ಹುಟ್ಟುಹಬ್ಬಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿ ತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದ್ದು, ‘ಕಬ್ಜ’ ಚಿತ್ರತಂಡ ಕೂಡ ಪೋಸ್ಟರ್ ಅಪ್ಲೋಡ್ ಮಾಡುವ ಮೂಲಕ ಹುಟ್ಟುಹಬ್ಬದ ಶುಭಾಷಯ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...