alex Certify ಹುಟ್ಟುಹಬ್ಬದ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮದಲ್ಲಿ ವಿರಾಟ್ ಕೊಹ್ಲಿ

ಬಾರತ ಕ್ರಿಕೆಟ್‌ ತಂಡದ ಭರವಸೆಯ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಇಂದು ತಮ್ಮ 34ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2008 ಆಗಸ್ಟ್ 18ರಲ್ಲಿ ನಡೆದ ಭಾರತ ಹಾಗೂ ಶ್ರೀಲಂಕಾ ನಡುವಣ ಏಕದಿನ ಪಂದ್ಯದ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಪಾದಾರ್ಪಣೆ ಮಾಡಿದ ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್‌ ನಲ್ಲೇ ಸಾಕಷ್ಟು ದಾಖಲೆ ಬರೆದಿದ್ದಾರೆ 262 ಏಕದಿನ ಪಂದ್ಯಗಳನ್ನಾಡಿರುವ ಇವರು 12,344ರನ್ ಗಳಿಸಿದ್ದು. ಇದರಲ್ಲಿ 64 ಅರ್ಧಶತಕ ಹಾಗೂ 43 ಶತಕಗಳಿವೆ.

ವಿರಾಟ್ ಕೊಹ್ಲಿ ಐಸಿಸಿ ಏಕದಿನ ರ್ಯಾಂಕಿಂಗ್ ನಲ್ಲಿ 7 ನೇ ಸ್ಥಾನದಲ್ಲಿದ್ದರೆ ಟಿ ಟ್ವೆಂಟಿ ರ್ಯಾಂಕಿಂಗ್ ನಲ್ಲಿ 10ನೇ ಸ್ಥಾನ ಕಾಯ್ದುಕೊಂಡಿದ್ದಾರೆ. ಕಳಪೆ ಪ್ರದರ್ಶನದಿಂದ ಹಲವಾರು ಟೀಕೆಗೆ ಒಳಗಾಗಿದ್ದ ವಿರಾಟ್ ಕೊಹ್ಲಿ ಇದೀಗ ಮತ್ತೊಮ್ಮೆ ಭರ್ಜರಿ ಫಾರ್ಮ್ ನಲ್ಲಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

ಇಂದು ವಿರಾಟ್ ಕೊಹ್ಲಿ ಹುಟ್ಟುಹಬ್ಬದ ಪ್ರಯುಕ್ತ ಸಾಮಾಜಿಕ ಜಾಲತಾಣದಲ್ಲಿ ಅವರ ಅಭಿಮಾನಿಗಳು ಹಾಗೂ ಕ್ರಿಕೆಟಿಗರಿಂದ ಶುಭಾಶಯಗಳ ಮಹಾಪೂರವೇ ಹರಿದುಬಂದಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಕೂಡ ತನ್ನ ಅಧಿಕೃತ ಟ್ವಿಟರ್ ನಲ್ಲಿ ವಿರಾಟ್ ಕೊಹ್ಲಿಗೆ ವಿಶ್ ಮಾಡಿದೆ

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...